* ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು* ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ* TET ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ 

ಬೆಂಗಳೂರು(ಜು.02): ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಹುದ್ದೆಯ ನೇಮಕಾತಿಗೆ ಅರ್ಹತೆ ಪಡೆಯಲು ನಡೆಸುವ 2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಕೆ-ಟಿಇಟಿ) ಶಿಕ್ಷಣ ಇಲಾಖೆ ಆಗಸ್ಟ್‌ 22 ರಂದು ಸಮಯ ನಿಗದಿಪಡಿಸಿದೆ. 

1ರಿಂದ 5ನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ. ಉತ್ತೀರ್ಣರಾಗಿರಬೇಕು ಹಾಗೂ 6ರಿಂದ 8ನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ. ಅಥವಾ ಪದವಿಯೊಂದಿಗೆ ಬಿ.ಇಡಿ ಅಥವಾ ಬಿ.ಎ.ಇಡಿ, ಬಿ.ಎಸ್ಸಿ. ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ, ಬಿಇಡಿ, ಬಿಎ ಇಡಿ, ಬಿಎಸ್ಸಿ ಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ತಿಳಿಸಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಶುಕ್ರವಾರದಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ.

ಶಿಕ್ಷಕರಿಗೆ ಗುಡ್‌ನ್ಯೂಸ್: TET ಸರ್ಟಿಫಿಕೇಟ್‌ಗೆ ಲೈಫ್‌ಟೈಂ ವಾಲಿಡಿಟಿ ಘೋಷಿಸಿದ ಕೇಂದ್ರ

ಆ.22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ. ಪ್ರವೇಶ ಪತ್ರಗಳನ್ನು ದಿನಾಂಕ ಆ.12ರಿಂದ ಆನ್‌ ಲೈನ್‌ ನಲ್ಲಿ ಡೌನ್‌ ಲೋಡ್‌ ಮಾಡಿ ಕೊಳ್ಳಬಹುದಾಗಿದೆ.

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.