ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ಮುಂದೆ ವಾರದಲ್ಲಿ 5 ದಿನ ಮಾತ್ರವೇ ಕೆಲಸ

ಸರ್ಕಾರ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರವೇ ಕೆಲಸ ನಿರ್ವಹಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2021ರ ಜನವರಿ 1ರಿಂದ ಜಾರಿಗೆ ಬರಲಿದೆ.

TN govt offices to revert to 5-day week from Jan 1 rbj

ಚೆನ್ನೈ, (ಅ.25): 2021ರ ಜನವರಿ 1ರಿಂದ ರಾಜ್ಯದ ಸರ್ಕಾರಿ ಕಚೇರಿಗಳು ವಾರದಲ್ಲಿ 5 ದಿನ ಮಾತ್ರವೇ ಕೆಲಸ ನಿರ್ವಹಿಸಲು ತಮಿಳುನಾಡು ಸರ್ಕಾರ ತೀರ್ಮಾನಿಸಿದೆ.

2020ರ ಮೇ 15ರಂದು ಹೊರಡಿಸಿದ ಆದೇಶದಲ್ಲಿ ಕೊರೋನಾ ವೈರಸ್ ಸೋಂಕು ಇರುವ ಹಿನ್ನೆಲೆಯಲ್ಲಿ ವಾರದ 6 ದಿನಗಳ ಕಾಲ ಶೇ.50ರಷ್ಟು ಕಚೇರಿಗಳು ಕಾರ್ಯನಿರ್ವಹಿಸಬೇಕು ಎಂದು ಆದೇಶ ನೀಡಿತ್ತು. ನಂತರ ಸೆಪ್ಟೆಂಬರ್ 1ರಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿತ್ತು.

ಈ ವರ್ಷ ಬೆಳೆದ ಯಾವ ಬೆಳೆ ರೈತನಿಗೆ ಸಿಗೋದಿಲ್ಲ: ಕಾರ್ಣಿಕ ಭವಿಷ್ಯ..!

ಶನಿವಾರ ಸೇರಿದಂತೆ ಪ್ರಸಕ್ತ 6 ದಿನಗಳ ಕೆಲಸದ ವಾರವನ್ನು ಮಾರ್ಪಡಿಸಲಾಗಿತ್ತು. 100% ಜನರೊಂದಿಗೆ ಐದು ದಿನಗಳ ಕಾರ್ಯನಿರ್ವಹಿಸಲು ಸೂಚಿಸಲಾಗಿತ್ತು. 2021ರ ಜನವರಿ 1ರಿಂದ ಜಾರಿಗೆ ಬರುವಂತೆ ಸರ್ಕಾರಿ ಕಚೇರಿಗಳು, ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಗಳು ಮಾತ್ರವೇ ಕೆಲಸ ನಿರ್ವಹಿಸಲಿವೆ' ಎಂದು ಮುಖ್ಯ ಕಾರ್ಯದರ್ಶಿ ಕೆ.ಷಣ್ಮುಗಂ ಆದೇಶದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಒಟ್ಟು 7,06,136 ಕೊರೋನಾ ಪಾಸಿಟಿವ್ ಕೇಸ್‌ಗಳಿದ್ದು,  ಒಟ್ಟು 10,893 ಮಂದಿ ಮೃತಪಟ್ಟಿದ್ದಾರೆ. ಚೆನ್ನೈ ಒಂದರಲ್ಲೇ 1,94,901 ಮಂದಿಗೆ ಕೊರೋನಾ ಪಾಸಿಟಿವ್  ಕೇಸ್‌ಗಳಿವೆ. 

Latest Videos
Follow Us:
Download App:
  • android
  • ios