UAS Dharwad Recruitment 2022: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇರ ಸಂದರ್ಶನ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಸಂಶೋಧನಾ ಅಭ್ಯರ್ಥಿ  ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.

UAS Dharwad Recruitment 2022 notification for senior research fellow gow

ಬೆಂಗಳೂರು(ಫೆ.5): ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.   ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಫೆಬ್ರವರಿ 11,2022ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ   ಹಿರಿಯ ಸಂಶೋಧನಾ ಅಭ್ಯರ್ಥಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ವೇತನ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ವೇತನವನ್ನು ನಿಗದಿಯಾಗಿದೆ.

HAL Recruitment 2022: ಜನರಲ್ ಮ್ಯಾನೇಜರ್ ಸೇರಿ 7 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 11,2022 ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಡೀನ್ ಕಛೇರಿ (ಕೃಷಿ),
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

QATAR JOBLESS KANNADIGAS: ಕತಾರ್​​ನಲ್ಲಿ ಕೆಲಸ ಕಳೆದುಕೊಂಡು ಅತಂತ್ರರಾಗಿದ್ದ 35 ಮಂದಿ ಮರಳಿ ಭಾರತಕ್ಕೆ

ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (Bangalore Water Supply and Sewerage Board) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅಗತ್ಯ ಇರುವ ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿಕೊಳ್ಳುತ್ತಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ  ಫೆಬ್ರವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://bwssb.karnataka.gov.in/ ಗೆ ಭೇಟಿ ನೀಡಿ.

ಅರ್ಹತೆ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನ್ಯಾಯಾಂಗ ಇಲಾಖೆಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ / ಸ್ವಯಂ ನಿವೃತ್ತಿ ಹೊಂದಿರಬೇಕು. 70 ವರ್ಷಗಳ ವಯಸ್ಸಿನ ಒಳಗಿನವರಾಗಿರಬೇಕು ಮತ್ತು ಆರೋಗ್ಯವಾಗಿ ಸದೃಢರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೈಯಕ್ತಿಕ ವಿವರ, ಸರ್ಕಾರಿ ಸೇವೆ ಸಲ್ಲಿಸಿರುವ ವಿವರ ಹಾಗೂ ಪಿಂಚಣಿ ಪುಸ್ತಕದ ನಕಲು ಪ್ರತಿಯ ವಿವರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : 'ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು', ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಹುದ್ದೆಗೆ ಸಂಬಂಧಿಸಿದ ಇತರ ಮಾಹಿತಿ ಪಡೆಯಲು ಕಚೇರಿಯ ಕರ್ತವ್ಯದ ವೇಳೆ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 05-30 ಗಂಟೆಯೊಳಗೆ ಪಡೆಯಲು ಕೋರಲಾಗಿದೆ.

Latest Videos
Follow Us:
Download App:
  • android
  • ios