ಗ್ರಾಮಲೆಕ್ಕಿಗ ಹುದ್ದಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ದಿನಾಂಕ 31/12/2019ರೊಳಗೆ ಸಲ್ಲಿಸಲು ಕೋರಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಉಡುಪಿ, (ನ.25): ಉಡುಪಿ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

18 ಗ್ರಾಮಲೆಕ್ಕಿಗ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 2/12/2019ರಿಂದ ಅರ್ಜಿ ಸಲ್ಲಿಸಬಹುದು.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಅರ್ಜಿಯನ್ನು hhh://udupi.nic.in ವೆಬ್‌ಸೈಟ್‌ನಲ್ಲಿ ದಿನಾಂಕ 31/12/2019ರೊಳಗೆ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು PUC ಅಥವಾ ಸಿಬಿಎಸ್‌ಸಿ ಅಥವಾ ಐಸಿಎಸ್‌ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. 

ವಯೋಮಿತಿ: ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400 ರಿಂದ 42,000 ರೂ. ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಹಾಗೂ ಹುದ್ದೆಗಳ ಇತರ ಮಾಹಿತಿಯನ್ನು ತಿಳಿದುಕೊಳ್ಳಲು ಇಲಾಖೆಯ ಅಧಿಕೃತ ವೆಬ್‌ಸೈಟ್ hhh://udupi.nic.inನಲ್ಲಿ ಪಡೆಯಬಹುದು.