Asianet Suvarna News Asianet Suvarna News

ಕೆಎಎಸ್ ಪರೀಕ್ಷೆ ಮುಂದೂಡಿಕೆ ಮಾಡಿ; ತರಾತುರಿ ಪರೀಕ್ಷೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕೇಂದ್ರ ಸಚಿವರು

ರಾಜ್ಯದಲ್ಲಿ ಆ.27ರಂದು ನಡೆಸಲಾಗುತ್ತಿರುವ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Union Minister H D Kumaraswamy demanded for KAS Exam Postponed sat
Author
First Published Aug 15, 2024, 2:50 PM IST | Last Updated Aug 15, 2024, 2:50 PM IST

ಬೆಂಗಳೂರು (ಆ.15): ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು 'ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್‌ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ.

ಆ.15 ರಂದು ಎಸ್‌ಡಿಸಿ ಸರ್ವರ್ ನಿರ್ವಹಣೆ: ಎಂಡಿಎಸ್, ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ದಿನಾಂಕ ವಿಸ್ತರಣೆ

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್ ಸರಕಾರ ಹಾಗೂ ಕೆಪಿಎಸ್‌ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಅವರ ಪೋಸ್ಟ್‌ಗೆ ಕಾಮೆಂಟ್ ಮಾಡಿರುವ ವ್ಯಕ್ತಿಯೊಬ್ಬರು 'ಧನ್ಯವಾದಗಳು ಕುಮಾರಣ್ಣ ವಿದ್ಯಾರ್ಥಿಗಳ ಪರ ದ್ವನಿ ಎತ್ತಿರುವುದಕ್ಕೆ. ಕೆಪಿಎಸ್‌ಸಿ ಜಿದ್ದಾಜಿದ್ದಿಗೆ ಬಿದ್ದಂತೆ ವರ್ತಿಸುತ್ತಿರುವುದಕ್ಕೆ ಮತ್ತು ಯಾರಾರು ಇದರ ಹಿಂದೆ ಇದ್ದಾರೆ ಎಂಬುದು ನಿಮಗೆ ತಿಳಿದಿದೆ. ಒಂದು ಪತ್ರಿಕಾಗೋಷ್ಠಿ ಮಾಡಿ ಎಲ್ಲವನ್ನೂ ಬಹಿರಂಗಗೊಳಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಿ. ನೀವೇ ಕೆಪಿಎಸ್‌ಸಿಗೆ ಮೂಗು ದಾರ ಹಾಕಿ ಎಂದು ಮನವಿ ಮಾಡಿಕೊಂಡಿದ್ದಾರೆ.

ನಾನು ನಂದಿನಿ ಡೆಲ್ಲಿಗೆ ಹೊಂಟೀನಿ; ದೆಹಲಿ ಸರ್ಕಾರದಿಂದ 1 ಲಕ್ಷ ಲೀಟರ್ ನಂದಿನಿ ಹಾಲಿಗೆ ಡಿಮ್ಯಾಂಡ್!

Latest Videos
Follow Us:
Download App:
  • android
  • ios