Vijayapura Panchayat Recruitment 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ
ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು(ಡಿ.28): ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Library Supervisor ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ https://vijayapura.nic.in/ ಗೆ ಭೇಟಿ ನೀಡಿ.
ಶೈಕ್ಷಣಿಕ ವಿದ್ಯಾರ್ಹತೆ: ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಹತೆಗಳು: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಗ್ರಂಥಾಲಯ ವಿಜ್ಞಾನದಲ್ಲಿ () ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.
BMCRI RECRUITMENT 2022: ಬೆಂಗಳೂರು ಮೆಡಿಕಲ್ ಕಾಲೇಜಿನ ಡೈರೆಕ್ಟರ್ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ
ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು.
ಆಯ್ಕೆ ಪ್ರಕ್ರಿಯೆ: ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಸಲ್ಲಿಸಲು ಕೋರಲಾಗಿದೆ.
ಕಚೇರಿ ವಿಳಾಸ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.
NTPC Recruitment 2022: ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ
ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ: ರಾಯಚೂರಿನ (Raichur) ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ (Hutti Gold Mines Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager), ಡಿಜಿಎಂ, ಜನರಲ್ ಮ್ಯಾನೇಜರ್ (General Manager) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ https://huttigold.karnataka.gov.in/ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು.
ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ
I/c ಎಕ್ಸಿಕ್ಯೂಟಿವ್ ಡೈರೆಕ್ಟರ್
ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್
PO ಹಟ್ಟಿ- 584115
ರಾಯಚೂರು ಜಿಲ್ಲೆ
ಕರ್ನಾಟಕ
C.V. Raman Hospital Recruitment 2022: ಖಾಲಿ ಇರುವ Pharmacist ಮತ್ತು Staff Nurse ಹುದ್ದೆ