Asianet Suvarna News Asianet Suvarna News

UAS Dharwad Recruitment 2022: ಕೃಷಿ ವಿಶ್ವವಿದ್ಯಾಲಯದ Senior Research Fellow ಹುದ್ದೆಗೆ ಅರ್ಜಿ ಆಹ್ವಾನ

ಖಾಲಿ ಹುದ್ದೆಗಳ ಭರ್ತಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಅಧಿಸೂಚನೆ
ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚನೆ
ಜನವರಿ 21 ರಂದು ನಡೆಯಲಿರುವ ನೇರ ಸಂದರ್ಶನ
 

walk in interview for Senior Research Fellow posts at university of agricultural sciences dharwad gow
Author
Bengaluru, First Published Jan 14, 2022, 9:02 PM IST

ಬೆಂಗಳೂರು(ಡಿ.27): ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.  ಒಟ್ಟು 2 ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು,  ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಡಿಸೆಂಬರ್ 31,2021ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ   ಹಿರಿಯ ಸಂಶೋಧನಾ ಅಭ್ಯರ್ಥಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಕೃಷಿ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ, ಫಾರ್ಮ್ ಮೆಷಿನರಿಯಲ್ಲಿ ಸ್ನಾತಕೋತ್ತರ ಪದವಿ ಮತ್ತು ಪವರ್ ಇಂಜಿನಿಯರಿಂಗ್/ಮೆಕ್ಯಾನಿಕಲ್ ಇಂಜಿನಿಯರಿಂಗ್​​ನಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ವೇತನ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.  ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 31,000/-ರೂ ವೇತನವನ್ನು ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜನವರಿ 21ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಡೀನ್ ಕಛೇರಿ (ಕೃಷಿ),
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

NORTH EASTERN RAILWAY RECRUITMENT 2022: ಮಾಜಿ ಸೈನಿಕರಿಗೆ ಈಶಾನ್ಯ ರೈಲ್ವೆಯಲ್ಲಿ ಉದ್ಯೋಗವಕಾಶ

ಕರ್ನಾಟಕ ನೀರಾವರಿ ನಿಗಮದಲ್ಲಿನ ಸೆಕ್ರೆಟರಿ ಹುದ್ದೆಗೆ ಅರ್ಜಿ ಆಹ್ವಾನ: ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ (Karnataka Neeravari Nigam Limited -KNNL) ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.   ಕಂಪನಿ ಕಾರ್ಯದರ್ಶಿ(Company Secretary) ಒಟ್ಟು 2 ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ಎರಡು ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ knnlindia.com ಗೆ ಭೇಟಿ ನೀಡಬಹುದು. ಆಯ್ಕೆಯಾದವರು ಧಾರವಾಡ ಕೇಂದ್ರಕ್ಕೆ  ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಕಾನೂನು ಪದವಿ ಪಡೆದಿರಬೇಕು.

Prasar Bharati Recruitment 2022: ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.20 ಕೊನೆ ದಿನ

ವಯೋಮಿತಿ:ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಜನವರಿ 27, 2022ಕ್ಕೆ 45 ವರ್ಷ ಮೀರಿರಬಾರದು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು
ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್
ರಿಜಿಸ್ಟರರ್ಡ್​ ಆಫೀಸ್
4ನೇ ಮಹಡಿ
ಕಾಫಿ ಬೋರ್ಡ್ ಬಿಲ್ಡಿಂಗ್
ನಂ.1, ಡಾ,ಬಿ.ಆರ್​.ಅಂಬೇಡ್ಕರ್ ವೀಧಿ
ಬೆಂಗಳೂರು-560001

Follow Us:
Download App:
  • android
  • ios