ಬಳ್ಳಾರಿ, (ಮಾ.10):  ಬಳ್ಳಾರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 130 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಆಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಏಪ್ರಿಲ್ 4,2020ರೊಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕೇವಲ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ನೇಮಕಾತಿ

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಸಲ್ಲಿಸುವರು 10ನೇ ತರಗತಿ (SSLC) ಪಾಸ್ ಆಗಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು 4ನೇ ತರಗತಿ ತೇರ್ಗಡೆಯಾಗಿರಬೇಕು. 

ವಯೋಮಿತಿ: 18 ವರ್ಷ ಮೇಲ್ಪಟ್ಟ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. OBC (2A/2B/3A/3B)ಮತ್ತು SC/ST/PWD ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020: ಅರ್ಜಿ ಹಾಕಿ

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು:
* 2.ಜನನ ಪ್ರಮಾಣ ಪತ್ರ ( SSLC ಅಂಕಪಟ್ಟಿ) 
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ತಹಶೀಲ್ದಾರರು /ಉಪ ತಹಶೀಲದಾರ್ ಅವರಿಂದ ಪಡೆದ 1 ವರ್ಷದದೊಳಗಿನ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ