2032ಕ್ಕೆ 1 ಟ್ರಿಲಿಯನ್‌ ಆರ್ಥಿಕತೆ ರಾಜ್ಯದ ಗುರಿ: ಸಚಿವ ಎಂ.ಬಿ.ಪಾಟೀಲ್‌

ರಾಜ್ಯವನ್ನು 2032ರ ವೇಳೆಗೆ ಒಂದು ಟ್ರಿಲಿಯನ್‌ ಡಾಲರ್‌ ಗಾತ್ರದ ಆರ್ಥಿಕತೆಯನ್ನಾಗಿ ಬೆಳೆಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ. ಇದನ್ನು ಸಾಧಿಸಲು ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸುತ್ತಿದ್ದು, ಹೂಡಿಕೆಯ ಹರಿವಿನಿಂದ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆ ಎರಡೂ ಸಾಧ್ಯವಾಗಲಿವೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. 

1 trillion economy of the state by 2032 Says Minister MB Patil gvd

ಬೆಂಗಳೂರು (ಮಾ.05): ರಾಜ್ಯವನ್ನು 2032ರ ವೇಳೆಗೆ ಒಂದು ಟ್ರಿಲಿಯನ್‌ ಡಾಲರ್‌ ಗಾತ್ರದ ಆರ್ಥಿಕತೆಯನ್ನಾಗಿ ಬೆಳೆಸಲು ರಾಜ್ಯ ಸರ್ಕಾರ ಗುರಿ ಹೊಂದಿದೆ. ಇದನ್ನು ಸಾಧಿಸಲು ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸುತ್ತಿದ್ದು, ಹೂಡಿಕೆಯ ಹರಿವಿನಿಂದ ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕ ಬೆಳವಣಿಗೆ ಎರಡೂ ಸಾಧ್ಯವಾಗಲಿವೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ ಗ್ಲೋಬಲ್ ಬಿಸಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಿ ಸೋಮವಾರ ಅವರು ಮಾತನಾಡಿದರು.

ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದೆ. ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಅಲ್ಲದೆ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿ 4.0 ಗೆ ಚಾಲನೆ ನೀಡಿದ್ದು, ಕೈಗಾರಿಕಾ ವಲಯದಲ್ಲಿ ತೀವ್ರ ಅಭಿವೃದ್ಧಿ ನಿರೀಕ್ಷಿಸಿದ್ದೇವೆ ಎಂದು ಹೇಳಿದರು. ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಕೈಗಾರಿಕಾ ಕ್ರಾಂತಿಗೆ ನೆರವಾಗಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. 

ಬಿಜೆಪಿ-ಜೆಡಿಎಸ್‌ನವರಿಗೆ ಅಧಿಕಾರ ಸಿಕ್ಕರೂ ಏನೂ ಮಾಡಲಿಲ್ಲ: ಡಿ.ಕೆ.ಶಿವಕುಮಾರ್

ಈ ಎಲ್ಲ ಜಾಗಗಳಿಗೆ ಬಂದರು, ರೈಲು ಅಥವಾ ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಉತ್ತಮಪಡಿಸುತ್ತೇವೆ ಎಂದು ಭರವಸೆ ನೀಡಿದರು. ಬೆಂಗಳೂರು ನಗರ ಇಡೀ ಜಾಗತಿಕ ಸಮುದಾಯಕ್ಕೆ ಪ್ರತಿಭಾವಂತ ಮಾನವ ಸಂಪನ್ಮೂಲ ಒದಗಿಸುವ ತೊಟ್ಟಿಲಾಗಿದೆ. ವಿಶೇಷವಾಗಿ ಆಟೋಮೇಶನ್ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಿಗೆ ಸರಕಾರವು ಒತ್ತು ಕೊಡುತ್ತಿದೆ. ಇದಲ್ಲದೆ ಶುದ್ಧ ಇಂಧನ ನೀತಿ, ಮರುಬಳಕೆ ಇಂಧನಗಳ ಕ್ಷೇತ್ರ, ವಿದ್ಯುತ್ ಚಾಲಿತ ವಾಹನಗಳ ತಯಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಅದರ ರಫ್ತು, ಎಲೆಕ್ಟ್ರಾನಿಕ್ ವಿನ್ಯಾಸ ಮತ್ತು ಸಂಶೋಧನೆ, ನಾವೀನ್ಯತೆ ಕ್ಷೇತ್ರಗಳಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. 

ಜನರ ಸಮಸ್ಯೆಗೆ ಸ್ಪಂದಿಸಿ ಉತ್ತಮ ಆಡಳಿತ ನೀಡಿರುವೆ: ಕೇಂದ್ರ ಸಚಿವ ಭಗವಂತ ಖೂಬಾ

ಒಟ್ಟಾರೆಯಾಗಿ ಬೆಂಗಳೂರು ನಗರವು ಜಗತ್ತಿನಲ್ಲಿ 4ನೇ ಅತಿದೊಡ್ಡ ತಂತ್ರಜ್ಞಾನ ಮತ್ತು ನಾವೀನ್ಯತೆಯ ತಾಣ ಎಂದು ಎಂ.ಬಿ. ಪಾಟೀಲ್‌ ವಿವರಣೆ ನೀಡಿದರು. ನ್ಯೂಯಾರ್ಕ್‌ನ ವರ್ಲ್ಡ್ ಟ್ರೇಡ್ ಸೆಂಟರ್ಸ್ ಅಸೋಸಿಯೇಶನ್ ಮತ್ತು ಬೆಂಗಳೂರಿನ ಡಬ್ಲ್ಯುಟಿಸಿ ಸಂಯುಕ್ತವಾಗಿ ಏರ್ಪಡಿಸಿರುವ ಈ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ.ಆರ್. ಜಯಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಹಾಜರಿದ್ದರು.

Latest Videos
Follow Us:
Download App:
  • android
  • ios