ಚಿಕಿತ್ಸೆ ನಿರಾಕರಿಸಿದರೆ 1 ವರ್ಷ ಜೈಲು ಶಿಕ್ಷೆ..!

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ದೂರುಗಳ ನಡುವೆಯೇ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ‘ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ವೈದ್ಯರು ಮತ್ತು ನರ್ಸ್‌ಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಕಠಿಣ ಕಾನೂನು ಪ್ರಯೋಗಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.

1 year imprisonment for doctors if they denies treatment during this pandemic says R Ashok

ಬೆಂಗಳೂರು(ಜು.17): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ನಿರಾಕರಿಸುತ್ತಿವೆ ಎಂಬ ದೂರುಗಳ ನಡುವೆಯೇ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ. ‘ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ವೈದ್ಯರು ಮತ್ತು ನರ್ಸ್‌ಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುವ ಕಠಿಣ ಕಾನೂನು ಪ್ರಯೋಗಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌. ಅಶೋಕ ಎಚ್ಚರಿಕೆ ನೀಡಿದ್ದಾರೆ.

"

ಕೊರೋನಾ ಸೋಂಕು ನಿಯಂತ್ರಣ ಕುರಿತು ಗುರುವಾರ ಬೆಂಗಳೂರು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬರುವ ವಿವಿಧ ಆಸ್ಪತ್ರೆಯ ಮುಖ್ಯಸ್ಥರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅಶೋಕ್‌ ಈ ವೇಳೆ ಸದರಿ ಎಚ್ಚರಿಕೆ ನೀಡಿದರು.

ಚೀನಾ ಕಂಪನಿಯಿಂದ ನೌಕರರ ಮೇಲೇ ಕೊರೋನಾ ಲಸಿಕೆ ಪ್ರಯೋಗ!

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲವು ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ವೈದ್ಯರು ಮತ್ತು ನರ್ಸ್‌ಗಳು ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ ಎಂಬ ವರದಿಗಳಿವೆ. ಇಂತಹ ವೈದ್ಯರು ಮತ್ತು ನರ್ಸ್‌ಗಳ ವಿರುದ್ಧ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವಂತಹ ವಿಧಿಸುವ ಅವಕಾಶ ಕಾನೂನಿನಲ್ಲಿ (ವಿಪತ್ತು ನಿರ್ವಹಣಾ ಕಾಯ್ದೆ, ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ) ಇದೆ. ಅದನ್ನು ಪ್ರಯೋಗಿಸಲಾಗುವುದು’ ಎಂದರು.

‘ಖಾಸಗಿ ಆಸ್ಪತ್ರೆಯಲ್ಲಿ ಶೇ.50ರಷ್ಟುಹಾಸಿಗೆಯನ್ನು ಮೀಸಲಿಟ್ಟು ಕೊರೋನಾ ಸೋಂಕಿತ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಒಂದು ವೇಳೆ ನೀಡದಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

50 ಸಾವಿರ ದಾಟಿದ ಕರ್ನಾಟಕ, ಬೆಂಗಳೂರು ಗಂಡಾಂತರ

‘ಇನ್ನು ಖಾಸಗಿ ಆಸ್ಪತ್ರೆಯವರು ಸೋಂಕಿತ ವ್ಯಕ್ತಿಗೆ ಬಿಯು ಸಂಖ್ಯೆ (ಬೆಂಗಳೂರು ನಗರ ಕೊರೋನಾ ಸೋಂಕು ಸಂಖ್ಯೆ) ತೆಗೆದುಕೊಂಡು ಬನ್ನಿ ಎನ್ನುವಂತಿಲ್ಲ, ರೋಗಿ ಆಸ್ಪತ್ರೆಗೆ ಬಂದರೆ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ಆನಂತರವೇ ಬಿಬಿಎಂಪಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದರು.

ವೈದ್ಯ ಸಿಬ್ಬಂದಿ ಕ್ವಾರಂಟೈನ್‌ಗೆ ವ್ಯವಸ್ಥೆ:

‘ಕೆಲವು ವೈದ್ಯರು ಮತ್ತು ನರ್ಸ್‌ಗಳು ಏಳು ದಿನ ಕೆಲಸ ಮಾಡಬೇಕು. ಏಳು ದಿನ ಕ್ವಾರಂಟೈನ್‌ನಲ್ಲಿ ಇರಬೇಕು. ಇದರಿಂದ ಮನೆಗೆ ಹೋಗುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಮಸ್ಯೆ ಹೇಳಿಕೊಂಡಿದ್ದಾರೆ. ಅಂತಹ ವೈದ್ಯರು ಹಾಗೂ ನರ್ಸ್‌ಗಳಿಗೆ ಆಸ್ಪತ್ರೆಯ ಸಮೀಪದಲ್ಲಿ ಹೋಟೆಲ್‌ ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios