ತುಮಕೂರು (ಜೂ.06): ಸರ್ಕಾರ ಗುಡಿಸಲು ಮುಕ್ತ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. 

ರಾಜ್ಯದಲ್ಲಿ ಆದ್ಯತೆಗನುಸಾರ ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಮೂರು ಲಕ್ಷ ಮನೆಗಳನ್ನು ನಿರ್ಮಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. 

ಲಾಕ್ಡೌನ್‌ ಸಡಿಲಿಕೆ ಕಾದು ನೋಡಿ : ಸಚಿವ ಸೊಮಣ್ಣ

ಉಳಿದಂತೆ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಇದರಿಂದ ಲಕ್ಷಾಂತರ ಮಂದಿಗೆ ನೆರವಾಗುವುದಾಗಿ ಸಚಿವರು ತಿಳಿಸಿದರು. 

ಕರ್ನಾಟಕದಲ್ಲಿ ಮತ್ತಷ್ಟು ತಗ್ಗಿದ ಕೊರೋನಾ, ಪಾಸಿಟಿವಿಟಿ ದರದಲ್ಲಿ ಭಾರೀ ಇಳಿಕೆ

 ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವವರ ಜೊತೆಗೆ ಸರ್ಕಾರ ಸದಾ ಇರುತ್ತದೆ. ಈಗಾಗಲೇ ಕೊರೋನಾ ಪರಿಹಾರವನ್ನೂ ಘೋಷಿಸಿದ್ದು, ಸೋಂಕು ನಿಯಂತ್ರಣ ಕಾರ್ಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona