Asianet Suvarna News Asianet Suvarna News

ಕರ್ನಾಟಕ ಸೇರ್ಪಡೆಗೆ ಮಹಾರಾಷ್ಟ್ರದ 10 ಗ್ರಾಪಂಗಳ ನಿರ್ಣಯ

  ಮಹಾರಾಷ್ಟ್ರ ಸರ್ಕಾರ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡು, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ ತಾಲೂಕಿನ 10 ಗ್ರಾಮ ಪಂಚಾಯಿತಿಗಳು ತಮ್ಮ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವಂತೆ ಠರಾವು ಪಾಸ್‌ ಮಾಡಿವೆ. ಇದರಿಂದಾಗಿ ಕರ್ನಾಟಕದ ಹಳ್ಳಿಗಳನ್ನು ಕೇಳುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.

10 villages of Maharashtra decision  to join Karnataka at belgum rav
Author
First Published Jul 26, 2023, 5:21 AM IST

ಬೆಳಗಾವಿ (ಜು.26) :  ಮಹಾರಾಷ್ಟ್ರ ಸರ್ಕಾರ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿದ್ದಕ್ಕೆ ಆಕ್ರೋಶಗೊಂಡು, ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ ತಾಲೂಕಿನ 10 ಗ್ರಾಮ ಪಂಚಾಯಿತಿಗಳು ತಮ್ಮ ಹಳ್ಳಿಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವಂತೆ ಠರಾವು ಪಾಸ್‌ ಮಾಡಿವೆ. ಇದರಿಂದಾಗಿ ಕರ್ನಾಟಕದ ಹಳ್ಳಿಗಳನ್ನು ಕೇಳುತ್ತಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ ಉಂಟಾಗಿದೆ.

ಶೇ.90ರಷ್ಟುಮರಾಠಿ ಭಾಷಿಕರೇ ಇಲ್ಲಿದ್ದು, ತಾಲೂಕಿನ 10 ಗ್ರಾ.ಪಂ.ಅಧ್ಯಕ್ಷರು, ಸದಸ್ಯರು ಮತ್ತು ಮುಖಂಡರು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿ, ಗಡಿಭಾಗದ ಹಳ್ಳಿಗಳನ್ನು ಕರ್ನಾಟಕದೊಂದಿಗೆ ವೀಲಿನಗೊಳಿಸುವಂತೆ ಆಗ್ರಹಿಸಿದ್ದಾರೆ. ಈ ಹಿಂದೆಯೂ ಜತ್ತ ತಾಲೂಕಿನ 42 ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ, ಈ ಗ್ರಾಮಗಳ ಅಭಿವೃದ್ಧಿಗೆ .1,900 ಕೋಟಿ ಅನುದಾನ ನೀಡುವುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಭರವಸೆ ನೀಡಿದ್ದರು.

ಸರ್ಕಾರ ಪತನ ತಂತ್ರ ನಿಜವಿರಬಹುದು: ಸಚಿವ ಸತೀಶ್‌ ಜಾರಕಿಹೊಳಿ

ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ಮಳೆಗಾಲ ಇದ್ದರೂ ಕಾಲಗ ತಾಲೂಕಿನಲ್ಲಿ ನೀರಿನ ಸಮಸ್ಯೆ ಇದೆ. ಹೀಗಿದ್ದರೂ ದೂಧಗಂಗಾ ನದಿಯಿಂದ ಇಚಲಕರಂಜಿಗೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ. ನೀರು ಸರಬರಾಜು ಮಾಡುವ ನಿರ್ಧಾರ ಕೈಬಿಡದಿದ್ದರೆ ಕರ್ನಾಟಕ ಸೇರುವ ಹೋರಾಟವನ್ನು ನಿರಂತರವಾಗಿ ನಡೆಸಲು ತೀರ್ಮಾನಿಸಿದ್ದಾರೆ.

ಭಾರೀ ಮಳೆ: ದೂಧಸಾಗರ ಜಲಾಶಯ ವೀಕ್ಷಣೆಗೆ ನಿರ್ಬಂಧ

Follow Us:
Download App:
  • android
  • ios