Asianet Suvarna News Asianet Suvarna News

ರಾಜ್ಯದಲ್ಲಿ ಹಸಿರೀಕರಣಕ್ಕೆ ಬಜೆಟ್‌ನಲ್ಲಿ 100 ಕೋಟಿ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಹಸಿರೀಕರಣ ವಿಸ್ತರಣೆಗೆ ಆದ್ಯತೆ ನೀಡಲಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ 100 ಕೋಟಿ ಮೀಸಲಿಡುತ್ತೇವೆ. ಹಾಗೆಯೇ ತೋಟಗಾರಿಕೆ ಫಾರಂ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

100 Crore for Greening in the Karnataka Says CM Basavaraj Bommai gvd
Author
First Published Jan 21, 2023, 12:00 PM IST

ಬೆಂಗಳೂರು (ಜ.21): ರಾಜ್ಯದಲ್ಲಿ ಹಸಿರೀಕರಣ ವಿಸ್ತರಣೆಗೆ ಆದ್ಯತೆ ನೀಡಲಾಗಿದ್ದು, ಈ ಬಾರಿಯ ಬಜೆಟ್‌ನಲ್ಲಿ 100 ಕೋಟಿ ಮೀಸಲಿಡುತ್ತೇವೆ. ಹಾಗೆಯೇ ತೋಟಗಾರಿಕೆ ಫಾರಂ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್‌ ಗಾಜಿನಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2023 ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರು ಉದ್ಯಾನ ನಗರ ಎಂಬ ಖ್ಯಾತಿ ಗಳಿಸಿದೆ. ಆದರೆ, ಅಭಿವೃದ್ಧಿ ಕಾಮಗಾರಿಗಳಿಂದಾಗಿ ಈ ಹೆಸರು ಹಿಂದೆ ಸರಿದಿದ್ದು, ಮತ್ತೊಮ್ಮೆ ಉದ್ಯಾನ ನಗರದ ಗತ ವೈಭವ ಮರುಕಳಿಸುವಂತೆ ಸರ್ಕಾರ ಆದ್ಯತೆ ನೀಡಲಿದೆ. ಲಾಲ್‌ಬಾಗ್‌, ಕಬ್ಬನ್‌ಪಾರ್ಕ್ ಸೇರಿದಂತೆ ಬಿಬಿಎಂಪಿ ಉದ್ಯಾನಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಗರದ ಹೊರ ವಲಯದಲ್ಲಿ ಉದ್ಯಾನಗಳ ಅಭಿವೃದ್ಧಿ ಮಾಡಲಾಗುವುದು. ಈ ಮೂಲಕ ಉದ್ಯಾನ ನಗರ ಹೆಸರನ್ನು ಖಾಯಂಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಕೃಷಿಗೆ ಔಟ್‌ಲುಕ್‌ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಹಸಿರು ಪದರ ವಿಸ್ತರಣೆಯಾಗಬೇಕು. ಅದಕ್ಕಾಗಿ ಹಸಿರು ಆಯವ್ಯಯವನ್ನು ರೂಪಿಸಲಾಗಿದೆ. ಗುಡ್ಡಗಾಡು ಪ್ರದೇಶಗಳನ್ನು ಸಂಪೂರ್ಣ ಹಸಿರು ಮಾಡಿ ಪರಿಸರ ಸಮತೋಲನ ಕಾಯ್ದುಕೊಳ್ಳಲು ರಾಜ್ಯದಲ್ಲಿ ಪ್ರಥಮ ಬಾರಿಗೆ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ತೋಟಗಾರಿಕೆ ವಿಸ್ತರಣೆಯೂ ಆಗಬೇಕು. ಲಾಲ್‌ಬಾಗ್‌ನಿಂದ ಹಿಡಿದು ರಾಜ್ಯದೆಲ್ಲೆಡೆ ತೋಟಗಾರಿಕೆ ಇದೆ. ಇವುಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸುತ್ತಿದ್ದೇವೆ. ತೋಟಗಾರಿಕೆಯಿಂದ ಹಸಿರು ಹೆಚ್ಚುವುದರ ಜೊತೆಗೆ ಅಲ್ಲಿ ಉತ್ಪಾದನೆ, ಉತ್ಪನ್ನ ಹೆಚ್ಚಾಗುತ್ತದೆ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸಲು ಸಾಧ್ಯವಿದೆ. ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆಯನ್ನು ವಿಸ್ತರಿಸಿ, ಫಾಮ್‌ರ್‍ಗಳನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.

ಸಸ್ಯ ಸಂಪತ್ತಿನ ಅನಾವರಣ: 213ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ್ದು, ಫಲಪುಷ್ಪ ಪ್ರದರ್ಶನ ಅತ್ಯಂತ ಜನಪ್ರಿಯವಾಗಿದೆ. ಪ್ರತಿ ವರ್ಷ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಈ ಬಾರಿ 10- 15 ಲಕ್ಷ ಜನರು ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಬರುವ ನಿರೀಕ್ಷೆ ಇದೆ. ಅದಕ್ಕಾಗಿ ತೋಟಗಾರಿಕಾ ಇಲಾಖೆ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಫಲಪುಷ್ಪ ಪ್ರದರ್ಶನದ ಮುಖಾಂತರ ರಾಜ್ಯದ ಸಸ್ಯ ಸಂಪತ್ತು ಎಷ್ಟುದೊಡ್ಡದಿದೆ, ವಿಭಿನ್ನ, ವಿಸ್ತಾರವಾಗಿದೆ ಎಂದು ಪ್ರದರ್ಶನವಾಗುತ್ತದೆ. ಸಸ್ಯಸಂಪತ್ತನ್ನು ಹೆಚ್ಚಿಗೆ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಚುನಾವಣೆಗೆ ಮುನ್ನ ಯೋಜನೆಗಳಿಗೆ ಬಂಪರ್‌: ಸಚಿವ ಸಂಪುಟ ಸಭೆಯಲ್ಲಿ ಅನುದಾನಕ್ಕೆ ಒಪ್ಪಿಗೆ

ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ತೋಟಗಾರಿಕೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್‌ ಕಠಾರಿಯಾ, ನಿರ್ದೇಶಕ ನಾಗೇಂದ್ರಪ್ರಸಾದ್‌, ಜಂಟಿ ನಿರ್ದೇಶನ(ಉದ್ಯಾನ) ಜಗದೀಶ್‌ ಉಪಸ್ಥಿತರಿದ್ದರು.

Follow Us:
Download App:
  • android
  • ios