Asianet Suvarna News Asianet Suvarna News

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.

100 Crores Will be Released Soon for Border Kannadigas Says CM Basavaraj Bommai gvd
Author
First Published Feb 3, 2023, 10:38 AM IST

ಬೆಂಗಳೂರು (ಫೆ.03): ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಗುರುವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನಮ್ಮ ಗಡಿಯಲ್ಲಿರುವ ಕನ್ನಡಿಗರ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕು. ಗಡಿಭಾಗದಲ್ಲಿ ಇದ್ದಾರೆಂಬ ಕಾರಣಕ್ಕೆ ಮನಸ್ಸಿನಿಂದ ದೂರ ಮಾಡುವುದು ಸರಿಯಲ್ಲ. ಕರ್ನಾಟಕದ ಮುಖ್ಯಮಂತ್ರಿಯಾಗಿ ನಮ್ಮ ಗಡಿಯಲ್ಲಿರುವ ಜನರಿಗೆ ಎಲ್ಲ ಸೌಕರ್ಯಗಳು, ಅವಕಾಶಗಳನ್ನು ಕೊಡುವ ಕೆಲಸವನ್ನು ಮಾಡುತ್ತಿದ್ದೇನೆ. ಗಡಿಭಾಗದ ಜನರ ಅಭಿವೃದ್ಧಿಗೆಂದು ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರು.ಗಳನ್ನು ಕೊಟ್ಟಿದ್ದೇವೆ. ಈಗ 100 ಕೋಟಿ ರು.ಗಳನ್ನು ಇದೇ ವರ್ಷ ಮಾರ್ಚ್‌ 31ರೊಳಗೆ ಕೊಡುತ್ತೇನೆ. ಅದಕ್ಕೆ ಬೇಕಾದ ಕ್ರಿಯಾಯೋಜನೆಯನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದವರು ರೂಪಿಸುವಂತೆ ಸೂಚಿಸಿದ್ದೇನೆ. ಮುಂದಿನ ವರ್ಷವೂ ಕೂಡ 100 ಕೋಟಿ ರು.ಗಳನ್ನು ಕೊಡುತ್ತೇನೆ. ದುಡ್ಡು ಕೊಡುವುದು ಮುಖ್ಯವಲ್ಲ. ಅದು ಸದುಪಯೋಗವಾಗಬೇಕು ಎಂದು ಹೇಳಿದರು.

ಅಪ್ಪಣ್ಣ ಸಮಾಜವನ್ನು ಪರಿಶಿಷ್ಠ ಜಾತಿಗೆ ಸೇರಿಸಲು ಕ್ರಮ: ಸಿಎಂ ಬೊಮ್ಮಾಯಿ

ಗಡಿಭಾಗದ ಜನರ ಸಮಸ್ಯೆಗಳನ್ನು ಮಾತ್ರ ಇತ್ಯರ್ಥ ಪಡಿಸುವುದಲ್ಲ. ಜೊತೆಗೆ ಗಡಿಯಾಚೆ ಇರುವ ಕನ್ನಡಿಗರೂ ಕೂಡ ನಮ್ಮವರು. ಅವರಿಗೆ ಏನು ಸವಲತ್ತು ಕೊಡಬೇಕೋ ಅದನ್ನು ಕೊಡಲು ನಾವು ಎಲ್ಲ ರೀತಿಯಲ್ಲೂ ಸಿದ್ಧರಿದ್ದೇವೆ. ನಾವೆಲ್ಲ ರೀತಿಯಲ್ಲಿ ಸಿದ್ಧರಿದ್ದೇವೆ. ಕನ್ನಡ ನಾಡು, ನುಡಿ, ನೆಲ ಜಲದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬದ್ಧತೆಯಿದ್ದು ಕನ್ನಡ ಮತ್ತು ಕನ್ನಡಿಗರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ, ಮಾಜಿ ಸಚಿವರಾದ ರಾಣಿ ಸತೀಶ್‌, ಲೀಲಾದೇವಿ ಆರ್‌.ಪ್ರಸಾದ್‌ ಉಪಸ್ಥಿತರಿದ್ದರು.

ಸಿಡಿ ಪ್ರಕರಣ ಬಗ್ಗೆ ಸಿಎಂ ಜತೆ ಚರ್ಚಿಸುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಾಧಕರಿಗೆ ಪ್ರಶಸ್ತಿ ಪ್ರದಾನ: ಕರ್ನಾಟಕ ಗಡಿನಾಡಿನ ಹಿರಿಯ ಚೇತನಗಳಾದ ಡಾ.ಚನ್ನಬಸವ ಪಟ್ಟದ್ದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣರೈ ಅವರುಗಳ ಹೆಸರಿನಲ್ಲಿ ಸ್ಥಾಪಿಸಿರುವ ‘ಗಡಿನಾಡ ಚೇತನ’ ಪ್ರಶಸ್ತಿಯನ್ನು ಗಡಿನಾಡಿನ ಕನ್ನಡ ಹೋರಾಟಗಾರ ಎಂ.ಎಸ್‌.ಸಿಂಧೂರ, ಹೋರಾಟಗಾರ ಅಶೋಕ್‌ ಚಂದರಗಿ ಮತ್ತು ಕಾಸರಗೋಡಿನ ಕನ್ನಡದ ಅಸ್ಮಿತೆಯ ಸಾಂಸ್ಕೃತಿಕ ಪೀಠ ಶ್ರೀ ಎಡನೀರು ಮಠಕ್ಕೆ ಪ್ರದಾನ ಮಾಡಲಾಯಿತು.

Follow Us:
Download App:
  • android
  • ios