*  ರಾಜ್ಯ, ಹೊರ ರಾಜ್ಯಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ*  ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ*  ಪ್ರಯಾಣಿಕರು ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು  

ಬೆಂಗಳೂರು(ಅ.08): ದಸರಾ(Dasara) ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ(KSRTC) ಅ.13ರಿಂದ 21ರ ವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ಸಾರಿಗೆ ಸಿಬ್ಬಂದಿಗೆ ದಸರಾ ಒಳಗೆ ವೇತನ: ಸಚಿವ ಶ್ರೀರಾಮುಲು

ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಈ ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ಅಧಿಕೃತ ಜಾಲತಾಣ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು. ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಉಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.