Asianet Suvarna News Asianet Suvarna News

ಕ್ರಿಸ್ಮಸ್ ಹಬ್ಬದ ಹಿನ್ನೆಲೆ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ ಗುಡ್ ನ್ಯೂಸ್, 1000 ವಿಶೇ‍ಷ ಬಸ್‌

ಕ್ರಿಸ್ಮಸ್ ಹಬ್ಬದ ಹಿನ್ನಲೆ  ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ರಾಜ್ಯ ಸಾರಿಗೆ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

1000 additional buses operated by KSRTC during  Christmas festival gow
Author
First Published Dec 20, 2023, 8:55 AM IST

ಕ್ರಿಸ್ಮಸ್ ಹಬ್ಬದ ಹಿನ್ನಲೆ  ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ರಾಜ್ಯ ಸಾರಿಗೆ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 22ರಿಂದ 24ರವರೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಿಂದ  ರಾಜ್ಯದ ಮೂಲೆಮೂಲೆಗೆ ತೆರಳಲು 1000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದೆ. ಅಲ್ಲದೆ ರಾಜ್ಯ, ಅಂತರರಾಜ್ಯದ ವಿವಿದೆಡೆಯಿಂದ 25ರಂದು ವಿಶೇಷ ಬಸ್ ಕಾರ್ಯಾಚರಣೆ ನಡೆಸಲಿದೆ.

* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

ಜಾಗತಿಕ ಆರ್ಥಿಕತೆಯಲ್ಲಿ ಭಾರತ ಸ್ಟಾರ್‌ ಪರ್‌ಫಾರ್ಮರ್‌: ಐಎಂಎಫ್‌

ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

ಪ್ರಯಾಣಿಕರು ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮೂಲಕ ಮಾಡಬಹುದು ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಸಾರ್ಟಿಸಿಯಿಂದ ಮಾಧ್ಯಮ ಪ್ರಕಟಣೆ ಹೊರಬಿದ್ದಿದೆ.

ಹೊಸಕೋಟೆಯ ವೈದ್ಯನಿಂದ 4 ವರ್ಷದಲ್ಲಿ 100 ಭ್ರೂಣ ಹತ್ಯೆ..!

 

Latest Videos
Follow Us:
Download App:
  • android
  • ios