* ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಳಿತ* ಇಂದು (ಸೆ.17) ಹೊಸದಾಗಿ 1003 ಜನರಿಗೆ ಕೊರೋನಾ* ರಾಜ್ಯ ಆರೋಗ್ಯ ಇಲಾಖೆ ಮಾಹಿತಿ 

ಬೆಂಗಳೂರು, (ಸೆ.17): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು (ಸೆ.17) ಹೊಸದಾಗಿ 1003 ಜನರಿಗೆ ಕೊರೋನಾ ದೃಢಪಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನು 18 ಜನ ಸೋಂಕಿತರು ಮೃತಪಟ್ಟಿದ್ದು, 1199 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮೆಘಾ ವ್ಯಾಕ್ಸಿನೇಶನ್‌: ಒಂದೇ ದಿನ 2 ಕೋಟಿ ಲಸಿಕೆ ಡೋಸ್ ಮೂಲಕ ಯೂರೋಪ್ ಹಿಂದಿಕ್ಕಿದ ಭಾರತ!

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,66,194 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 37,573 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,12,633 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 15,960 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 6 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು(ಶುಕ್ರವಾರ) ಹೊಸದಾಗಿ 310 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 276 ಮಂದಿ ಗುಣಮುಖರಾಗಿದ್ದು, 7456 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ಸಂಖ್ಯೆ
ಬಾಗಲಕೋಟೆ 0, ಬಳ್ಳಾರಿ 4, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ದಾವಣಗೆರೆ 3, ಗದಗ 1, ಹಾವೇರಿ 0, ಕಲಬುರ್ಗಿ 5, ಕೊಪ್ಪಳ 0, ರಾಯಚೂರು 3, ರಾಮನಗರ 2, ವಿಜಯಪುರ 0, ಯಾದಗಿರಿ 2, ಬೆಂಗಳೂರು 310, ದಕ್ಷಿಣಕನ್ನಡ 124, ಹಾಸನ 48, ಕೊಡಗು 96, ಮೈಸೂರು 46, ತುಮಕೂರು 61, ಉಡುಪಿ 94.