ಬೆಂಗಳೂರು, (ಏ.11): ರಾಜ್ಯದಲ್ಲಿ ಇಂದು (ಭಾನುವಾರ) ಕೋವಿಡ್ ಪ್ರಕರಣಗಳ ಸ್ಫೋಟವಾಗಿದೆ. ಬರೋಬ್ಬರಿ 10,250 ಜನರಿಗೆ ಸೊಂಕು ತಗುಲಿರುವುದು ದೃಢಪಟ್ಟಿದ್ದು, 40 ಜನರು ಮೃತಪಟ್ಟಿದ್ದಾರೆ.

ಇದರೊಂದಿಗೆ ಒಟ್ಟು ಸೊಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 12,889ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಶಾಕಿಂಗ್: ಲಾಕ್ ಡೌನ್ ಸುಳಿವು ನೀಡಿದ ಸಚಿವ ಸುಧಾಕರ್!

ಇನ್ನುಳಿದಂತೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2,638 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,83,157ಕ್ಕೆ ಏರಿಕೆಯಾಗಿದೆ. 

ಇನ್ನು 69,225 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 440 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಅತೀ ಹೆಚ್ಚು 
ಇನ್ನು ರಾಜ್ಯ ರಾಜಧಾನಿ ಕೋವಿಡ್ ಪ್ರಕರಣಗಳ ಸಂಖ್ಯೆ ಎಂದಿನಂತೆ ಹೆಚ್ಚುತ್ತಾ ಸಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ 24 ಗಂಟೆಯಲ್ಲಿ 7,584 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,81,982ಕ್ಕೆ ತಲುಪಿದೆ.