ವರ್ಗಾವಣೆಯ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೇ ಇರುವ ಅಧಿಕಾರಿಗಳು ಮುಂದಿನ ಸೇವಾ ಸ್ಥಳ ನಿಯುಕ್ತಿಗಾಗಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಬೆಂಗಳೂರು (ಜ.25): ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಪೊಲೀಸ್‌ ಇಲಾಖೆ 103 ಇನ್ಸ್‌ಪೆಕ್ಟರ್‌ಗಳು ಹಾಗೂ 23 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗೇನಾದರೂ ವರ್ಗಾವಣೆಯ ಆದೇಶದಲ್ಲಿ ಸ್ಥಳ ನಿಯುಕ್ತಿಗೊಳಿಸದೇ ಇರುವ ಅಧಿಕಾರಿಗಳು ಮುಂದಿನ ಸೇವಾ ಸ್ಥಳದ ನಿಯುಕ್ತಿಗಾಗಿ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ. ವರ್ಗಾವಣೆಯಾಗಿರುವ ಪೊಲೀಸ್‌ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಸ್ಥಳದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌ ಅವರ ನಿರ್ದೇಶನದಂತೆ ಐಪಿಎಸ್‌ ಉಮೇಶ್‌ ಕುಮಾರ್‌ ಅದೇಶ ಹೊರಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಸಂಬಂಧಪಟ್ಟ ಘಟಕಾಧಿಕಾರಿಗಳು ಮೇಲ್ಕಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆವರದಿ ಮಾಡಿಕೊಳ್ಳುವಂತೆ ಸೂಚಿಸುವುದು ಹಾಗೂ ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸಬೇಕೆಂದು ಹೇಳಲಾಗಿದೆ.

ವರ್ಗಾವಣೆಗೊಂಡಿರುವ 23 ಡಿವೈಎಸ್‌ಪಿ ಅಧಿಕಾರಿಗಳು:

ವರ್ಗಾವಣೆಗೊಂಡಿರುವ 103 ಪೊಲೀಸ್‌ ಇನ್ಸ್‌ಪೆಕ್ಟರ್‌ಗಳು: