ಬೆಂಗಳೂರು, (ಅ.10):  ರಾಜ್ಯದಲ್ಲಿ ಇಂದು (ಶನಿವಾರ) 10517 ಮಂದಿಗೆ ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 700786 ಕ್ಕೆ ಏರಿಕೆಯಾಗಿದೆ.

 ಕಳೆದ 24 ಗಂಟೆಗಳಲ್ಲಿ 8337 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 102 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 9891ಕ್ಕೇರಿದ್ರೆ,  ಇದುವರೆಗೆ 569947 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸದ್ಯ ಕರ್ನಾಟಕದಲ್ಲಿ 1,20,929 ಕೊರೋನಾ ಸಕ್ರಯಾ ಕೇಸ್‌ಗಳಿದ್ದು, ಅವರೆಲ್ಲರಿಗೂ ಚಿಕಿತ್ಸೆ ಮುಂದುವರೆದಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

 ಬೆಂಗಳೂರಿನಲ್ಲಿ ಶನಿವಾರ ಒಂದೇ ದಿನ 4563 ಕೊರೋನಾ ಕೇಸ್ ಪತ್ತೆಯಾಗಿದ್ದು,30 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3320 ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಕೊರೋನಾ ಕೇಸ್