Asianet Suvarna News Asianet Suvarna News

ಇಂದು ಸಿಎಂ ಬೊಮ್ಮಾಯಿರಿಂದ ಮಲೆ ಮಹದೇಶ್ವರಸ್ವಾಮಿಯ 108 ಅಡಿ ಪ್ರತಿಮೆ ಲೋಕಾರ್ಪಣೆ

ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಬೊಮ್ಮಾಯಿಯವರು ಶನಿವಾರ ಮಲೈ ಮಹದೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. 

108 Feet Statue of Male Mahadeshwara Hills inaugurated by CM Basavaraj Bommai On March 18th gvd
Author
First Published Mar 18, 2023, 3:00 AM IST

ಚಾಮರಾಜನಗರ (ಮಾ.18): ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಬೊಮ್ಮಾಯಿಯವರು ಶನಿವಾರ ಮಲೈ ಮಹದೇಶ್ವರ ಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡುವಿನಲ್ಲಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಇದೇ ವೇಳೆ, ಬೆಳ್ಳಿರಥ ಸಮರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಅವರು ಚಾಲನೆ ನೀಡಲಿದ್ದಾರೆ.

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ವಿ.ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಬರುತ್ತಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಗಿದೆ. ಸಚಿವರಾದ ಸಿಸಿ ಪಾಟೀಲ್‌, ಅಶೋಕ್‌, ಶಶಿಕಲಾ ಜೊಲ್ಲೆ ಅವರನ್ನು ಆಹ್ವಾನಿಸಿದ್ದೇವೆ. ಮಾದಪ್ಪ ಯಾರಾರ‍ಯರನ್ನು ಕರೆಸಿಕೊಳ್ಳಬೇಕೋ ಅವರನ್ನು ಕರೆಸಿಕೊಳ್ಳುತ್ತಾನೆ ಎಂದು ಮಾರ್ಮಿಕವಾಗಿ ನುಡಿದರು

ಸಿದ್ದರಾಮಯ್ಯಗೆ ಗೆಲುವಿನ ಗ್ಯಾರಂಟಿ ಇಲ್ಲ, ಇತರರನ್ನು ಹೇಗೆ ಗೆಲ್ಲಿಸುತ್ತಾರೆ: ಎಚ್‌.ಡಿ.ಕುಮಾರಸ್ವಾಮಿ

ಹುಲಿ ಮೇಲೆ ಕುಳಿತ ಮಾದಪ್ಪನ ಪ್ರತಿಮೆ: 108 ಅಡಿ ಎತ್ತರದ ಈ ಪ್ರತಿಮೆ ಎರಡು ಸ್ತರದಲ್ಲಿ ನಿರ್ಮಾಣವಾಗಿದೆ. ಕಲ್ಲು ಬಂಡೆಯ ರಚನೆಯ ಮೇಲೆ ಹುಲಿ ಮೇಲೆ ಕುಳಿತ ತ್ರಿಶೂಲ ಹಿಡಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ರೂಪಿಸಲಾಗಿದೆ. ಕಲ್ಲುಬಂಡೆಯಾಕೃತಿಯ ರಚನೆಯಲ್ಲಿ ಗುಹೆಯ ಮಾದರಿಯಲ್ಲಿ ಎರಡು ಮಹಡಿಗಳಿವೆ. ತಳಭಾಗದಲ್ಲಿ ಮಹದೇಶ್ವರ ಬೆಟ್ಟದ ಚಾರಿತ್ರಿಕ ಹಿನ್ನೆಲೆ ಸಾರುವ ಕಲಾಕೃತಿಗಳ ರಚನೆ, ಭಕ್ತರ ವಿಶ್ರಾಂತಿ ಸ್ಥಳಾವಕಾಶ ಸೇರಿದಂತೆ ಭಕ್ತರು, ಪ್ರವಾಸಿಗರಿಗೆ ಮಹದೇಶ್ವರ ಚರಿತ್ರೆ, ಪರಂಪರೆ ಸಾರುವ ಮ್ಯೂಸಿಯಂ ನಿರ್ಮಾಣವಾಗಲಿದೆ. 20 ಕೋಟಿ ರು.ವೆಚ್ಚದ ಯೋಜನೆ ಇದಾಗಿದೆ.

ಸಂವಿಧಾನಾತ್ಮಕ ಬಿಕ್ಕಟ್ಟು ಸೃಷ್ಟಿಸುತ್ತಿರುವ ಮಹಾರಾಷ್ಟ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಿ: ಸಿದ್ದರಾಮಯ್ಯ

ಪ್ರತಿಮೆ ನಿರ್ಮಾಣ ಮಾತ್ರ ಪೂರ್ಣಗೊಂಡಿದ್ದು, ಮಹದೇಶ್ವರಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿವೆ. ಗದಗದ ಆರ್ಕಿಟೆಕ್ಟ್ ಸಂಸ್ಥೆ ಪ್ರತಿಮೆ ನಿರ್ಮಿಸಿದೆ. ಮಾಲತೇಶ್‌ ಪಾಟೀಲ್‌ ಎಂಬುವರು ಪ್ರತಿಮೆಯ ಶಿಲ್ಪಿ. ಹನೂರು ಭಾಗದಿಂದ ಬೆಟ್ಟಕ್ಕೆ ಬರುವವರು ಆನೆದಿಂಬ ತಲುಪುತ್ತಿದ್ದಂತೆಯೇ ಹುಲಿಮೇಲೆ ಕುಳಿತ ಮಾದಪ್ಪನ ಪ್ರತಿಮೆಯ ಸೊಬಗನ್ನು ಕಾಣಬಹುದು. ತಮಿಳುನಾಡಿನಿಂದ ಬಂದರೆ ಗರಿಕೆಕಂಡಿ ಸಿಗುತ್ತಿದ್ದಂತೆ ಮಾದಪ್ಪನನ್ನು ಕಣ್ತುಂಬಿಕೊಳ್ಳಬಹುದು.

Follow Us:
Download App:
  • android
  • ios