ಕರ್ನಾಟಕದಲ್ಲಿ ಮತ್ತೆ ಕೊರೋನಾ ಆತಂಕ: 24 ಗಂಟೆಗಳಲ್ಲಿ ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ
ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಸೋಂಕು ತೀವ್ರವಾಗಿ ಏರಿಕೆಯಾಗತೊಡಗಿದೆ. ಅಂತೆಯೇ ಕರ್ನಾಟಕದಲ್ಲೂ ಸಹ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ
ಬೆಂಗಳೂರು, (ಮಾ.16): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು, ಮೂರಂಕಿಗೆ ಇಳಿದಿದ್ದ ಸೋಂಕಿತರ ಸಂಖ್ಯೆ ಇದೀಗ ನಾಲ್ಕು ಅಂಕಿಯನ್ನು ದಾಟುತ್ತಿದೆ.
ಹೌದು... ಇಂದು (ಮಂಗಳವಾರ) 1,135 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,62,339ಕ್ಕೆ ಏರಿಕೆಯಾಗಿದೆ.
ಕೊರೋನಾ ನಿಯಂತ್ರಿಸಲು ಮತ್ತೆ ಕಠಿಣ ಕ್ರಮ: ಮೋದಿ ಕೈಯ್ಯಲ್ಲಿ ಭವಿಷ್ಯ!
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಮಂಗಳವಾರ 710 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,12,699ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಐವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ಇಂದು ರಾಜ್ಯದಲ್ಲಿ 561 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,40,489ಕ್ಕೆ ಏರಿಕೆಯಾಗಿದೆ. ಇನ್ನು 9,428 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 129 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.