ಬೆಂಗಳೂರು, (ಡಿ.19) : ರಾಜ್ಯದಲ್ಲಿ ಕೊರೋನಾ ಸೋಂಕಿತ ಸಂಖ್ಯೆ ಮೂರಂಕಿಗೆ ಇಳಿದಿತ್ತು. ಆದ್ರೆ, ಕಳೆದ ಎರಡ್ಮೂರು ದಿನಗಳಿಂದ ನಾಲ್ಕಂಕಿಗೆ ಏರಿದೆ.

ಇಂದು (ಶನಿವಾರ) ಹೊಸದಾಗಿ 1,152 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9,08,275ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,ಕಳೆದ 24 ಗಂಟೆಗಳಲ್ಲಿ 2,147 ಸೋಂಕಿತರು ಗುಣಮುಖರಾಗಿದ್ದಾರೆ.

ವ್ಯಾಕ್ಸಿನ್ ಕೊಟ್ಟ ಜಾಗದಲ್ಲಿ ರಿಯಾಕ್ಷನ್, ಶುರುವಾಗಿದೆ ಟೆನ್ಷನ್; ಲಸಿಕೆ ಕೂಡಾ ಸೇಫಲ್ಲ?

 ಇದರೊಂದಿಗೆ ಇದುವರೆಗೆ 8,81,882 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯ 14,370 ಸಕ್ರೀಯ ಕೊರೋನಾ ಪ್ರಕರಣಗಳಿವೆ.

ಇನ್ನೂ ಇಂದು ಬೆಂಗಳೂರು ನಗರದಲ್ಲಿ 10 ಸೋಂಕಿತರು ಸೇರಿದಂತೆ ರಾಜ್ಯಾಧ್ಯಂತ 15 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 12,004ಕ್ಕೆ ಏರಿಕೆಯಾಗಿದೆ.