ಬೆಂಗಳೂರು, (ಡಿ.13): ರಾಜ್ಯದಲ್ಲಿ  ದಿನೇದಿನೇ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಇಂದು (ಭಾನುವಾರ)  ಹೊಸದಾಗಿ 1,196 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,01,410ಕ್ಕೇರಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,944 ಜನರು ಬಲಿಯಾಗಿದ್ದಾರೆ. 

ಕೊರೋನಾ ಲಸಿಕೆ ತಗೊಂಡವರು ಎಣ್ಣೆ ಹಾಕಂಗಿಲ್ಲ... ಹಾಕಿದ್ರೆ!

 ಸೋಂಕಿತರ ಪೈಕಿ 8,72,038 ಜನ ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. 17,409 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಂದು 672 ಹೊಸ ಕೊರೊನಾ ಕೇಸ್ ಪತ್ತೆ ಆಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವಿಶೇಷ ಅಂದ್ರೆ ಕೊರೋನಾ ಔಷಧ ಬರುವುದಕ್ಕೂ ಮೊದಲೇ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದು ಸಂತಸದ ಸಂಗತಿ