ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಪುನಃ ಹನ್ನೆರಡು ಮಂದಿ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಪುನಃ ಹನ್ನೆರಡು ಮಂದಿ ಐಎಎಸ್‌ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.

ಸ್ಥಳ ನಿರೀಕ್ಷಣೆಯಲ್ಲಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಗೆ ಎಂ.ಕೆ. ಅಯ್ಯಪ್ಪ, ಕರ್ನಾಟಕ ಗೃಹ ಮಂಡಳಿ ಆಯುಕ್ತರಾಗಿದ್ದ ಜಿ.ಎನ್‌. ಶಿವಮೂರ್ತಿ ಉದ್ಯಮ ಮತ್ತು ಲೈವ್ಲಿಹುಡ್‌ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕೆ.ಜಿ. ಶಾಂತಾರಾಂ ಕರ್ನಾಟಕ ಗೃಹ ಮಂಡಳಿ ಆಯುಕ್ತ ಹುದ್ದೆಗೆ, ಬೆಳಗಾವಿ ಜಿಲ್ಲಾ ಪಂಚಾಯತ್‌ ಸಿಇಒ ಆರ್‌. ರಾಮಚಂದ್ರನ್‌ ಅವರು ಬಾಗಲಕೋಟೆ ಜಿಲ್ಲಾಧಿಕಾರಿ ಹುದ್ದೆಗೆ, ಬಳ್ಳಾರಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ್‌ ಸಿಇಒ ಆಗಿ ವರ್ಗ ಮಾಡಲಾಗಿದೆ.

ಉಳಿದಂತೆ ಕೊಪ್ಪಳ ಜಿಲ್ಲಾ ಪಂಚಾಯತ್‌ ಸಿಇಒ ಆಗಿದ್ದ ವೆಂಕಟ್‌ರಾಜಾ ಅವರನ್ನು ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಹುದ್ದೆಗೆ ಹಾಗೂ ಫೌಜೀಯಾ ತರನಂ ಅವರನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ, ಜಿ.ಲಕ್ಷ್ಮೇಕಾಂತರೆಡ್ಡಿ ಅವರನ್ನು ಬಿಎಂಆರ್‌ಸಿಎಲ್‌ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ, ನಿತೀಶ್‌ ಕೆ.ಅವರನ್ನು ಬಳ್ಳಾರಿ ಜಿಲ್ಲಾ ಪಂಚಾಯತ್‌ ಸಿಇಒ ಹುದ್ದೆಗೆ, ಕೆ.ಎಂ.ಜಾನಕಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಹುದ್ದೆಗೆ, ಕೊಪ್ಪಳ ಜಿಲ್ಲಾ ಪಂಚಾಯತ್‌ ಸಿಇಒ ಆಗಿ ಪೆದ್ದಪ್ಪಯ್ಯ ಹಾಗೂ ರಾಜ್ಯ ಸಹಕಾರ ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಎನ್‌. ಜಯರಾಂ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.