ಕರ್ನಾಟಕದಲ್ಲಿ ಕೊರೋನಾ ಏರಿಕೆ: ಇರಲಿ ಎಚ್ಚರಿಕೆ
* ಕರ್ನಾಟಕದಲ್ಲಿ ಕೊರೋನಾ ಏರಿಕೆ
* ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
*ರಾಜ್ಯ ಆರೋಗ್ಯ ಇಲಾಖೆ ಮಾಹಿತಿ
ಬೆಂಗಳೂರು, (ಆ.31): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆಯಲ್ಲಿ ಮೊದಲ ಬಾರಿಗೆ ಸಾವಿರಕ್ಕಿಂತ ಕಡಿಮೆ ಬಂದಿದ್ದ ಪ್ರಕರಣಗಳ ಸಂಖ್ಯೆಯಲ್ಲಿ ಇಂದು (ಆ.31) ಏರಿಕೆಯಾಗಿದೆ.
ಹೌದು..ನಿನ್ನೆ (ಆ.30) ರಾಜ್ಯದಲ್ಲಿ 973 ಪಾಸಿಟಿವ್ ಕೇಸ್ ಪತ್ತೆಯಾಗಿದ್ದವು. ಆದ್ರೆ, ಇಂದು (ಮಂಗಳವಾರ) 1,217 ಕೊರೋನಾ ಪ್ರಕರಣಗಳು ದೃಢಪಟ್ಟಿವೆ.
ಕರ್ನಾಟಕದಲ್ಲಿ ಕೊರೋನಾ ಇಳಿಕೆ: ಮೊದಲ ಬಾರಿ 1 ಸಾವಿರಕ್ಕಿಂತ ಕಡಿಮೆ ಕೇಸ್
ಇನ್ನು ಮಹಾಮಾರಿಗೆ 25 ಮಂದಿ ಬಲಿಯಾಗಿದ್ದು, 1,198 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 37,318ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,93,715ಕ್ಕೆ ಏರಿಕೆಯಾಗಿದೆ. ಇನ್ನು 18,386 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇ. 0.94 ಇದೆ ಎಂದು ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.