ಬೆಂಗಳೂರು, (ಡಿ.18): ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 1,222 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,07,123 ಕ್ಕೆ ಏರಿಕೆಯಾಗಿದೆ.

ಕಳೆದ 8 ಮಂದಿ ಸೋಂಕಿತರು ಸಾವನ್ನಪ್ಪಿದ್ದು,  1039 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇದುವರೆಗೆ 879735 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸದ್ಯ 15,380 ಸಕ್ರಿಯ ಪ್ರಕರಣಗಳಿವೆ.

ವ್ಯಾಕ್ಸಿನ್ ಕೊಟ್ಟ ಜಾಗದಲ್ಲಿ ರಿಯಾಕ್ಷನ್, ಶುರುವಾಗಿದೆ ಟೆನ್ಷನ್; ಲಸಿಕೆ ಕೂಡಾ ಸೇಫಲ್ಲ?

ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,989 ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ಶುಕ್ರವಾರ 687 ಕೊರೋನಾ ಪಾಸಿಟಿವ್ ಬೆಳಕಿಗೆ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 381623ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.