* ಕರ್ನಾಟಕದ ಕೊರೋನಾ ಅಂಕಿ-ಸಂಖ್ಯೆ* ರಾಜ್ಯದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ ಸೋಂಕು* ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೂನ್ಯ ಸಾವಿನ ಪ್ರಕರಣ

ಬೆಂಗಳೂರು, (ಆ.28): ಕರ್ನಾಟಕ ರಾಜ್ಯದಲ್ಲಿ ಇಂದು (ಆ.28) ಹೊಸದಾಗಿ 1,229 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 13 ಜನರ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,45,993 ಕ್ಕೆ ಏರಿಕೆಯಾಗಿದ್ರೆ, ಈವರೆಗೆ ಕೊರೋನಾದಿಂದ 37,261 ಜನ ಸಾವನ್ನಪ್ಪಿದ್ದಾರೆ. ಇನ್ನು ಸೋಂಕಿತರ ಪೈಕಿ 28,89,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್‌ ಇದ್ದವರಲ್ಲಿ ಕೋವಿಡ್‌ ಸೋಂಕಿನ ಅಪಾಯ ಹೆಚ್ಚು

ಸದ್ಯ ರಾಜ್ಯದಲ್ಲಿ 18,897 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಸೋಂಕಿನ ಪಾಸಿಟಿವಿಟಿ ದರ 0.66% ಇದ್ರೆ, ಡೆತ್ ರೇಟ್ 1.05 % ಇದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 310 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಪೀಡಿತರ ಸಂಖ್ಯೆ 12,36,925 ಕ್ಕೆ ಏರಿಕೆಯಾಗಿದೆ. 12,36,925 ಸೋಂಕಿತರ ಪೈಕಿ 12,13,625 ಜನರು ಗುಣಮುಖರಾಗಿದ್ದಾರೆ. 

ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,322 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೋನಾ ಕೇಸ್ 
ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 310, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 35, ಚಿತ್ರದುರ್ಗ 15, ದಕ್ಷಿಣ ಕನ್ನಡ 207, ದಾವಣಗೆರೆ 12, ಧಾರವಾಡ 7, ಗದಗ 2, ಹಾಸನ 103, ಹಾವೇರಿ 3, ಕಲಬುರಗಿ 2, ಕೊಡಗು 75, ಕೋಲಾರ 15, ಕೊಪ್ಪಳ 2, ಮಂಡ್ಯ 21, ಮೈಸೂರು 82, ರಾಯಚೂರು 0, ರಾಮನಗರ 3, ಶಿವಮೊಗ್ಗ 42, ತುಮಕೂರು 44, ಉಡುಪಿ 146, ಉತ್ತರ ಕನ್ನಡ 42, ವಿಜಯಪುರ 1, ಯಾದಗಿರಿ 0.