* ಕರ್ನಾಟಕದಲ್ಲಿ ಕೊರೋನಾ ವೈರಸ್ ಅಂಕಿ-ಸಂಖ್ಯೆ* ಜುಲೈ 19ರಂದು 1,291 ಹೊಸ ಪ್ರಕರಣಗಳ,  40 ಜನರು ಸಾವು* ಸದ್ಯ ರಾಜ್ಯದಲ್ಲಿ 27,527 ಸಕ್ರಿಯ ಕೇಸ್​​ಗಳಿದ್ದು ಪಾಸಿಟಿವಿಟಿ ದರ 0.94

ಬೆಂಗಳೂರು, (ಜು.19): ರಾಜ್ಯದಲ್ಲಿ ಇಂದು (ಸೋಮವಾರ) 17,839 rapid ಟೆಸ್ಟ್ ಹಾಗೂ 1,18,135 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,35,974 ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪೈಕಿ ಕಳೆದ 24 ಗಂಟೆಗಳಲ್ಲಿ ಒಟ್ಟು 1,291 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 40 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

 ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,85,238 ಕ್ಕೆ ಏರಿಕೆಯಾಗಿದ್ರೆ, ಈವರೆಗೆ 36,197 ಮಂದಿ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. 

ಇನ್ನು ಕಳೆದ 24 ಗಂಟೆಗಳಲ್ಲಿ 3,015 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 28,21,491 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 27,527 ಸಕ್ರಿಯ ಕೇಸ್​​ಗಳಿದ್ದು ಪಾಸಿಟಿವಿಟಿ ದರ 0.94ಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.