Covid Crisis: ತಾಂತ್ರಿಕ ಸಮಸ್ಯೆಯಿಂದ ರಾಜ್ಯದಲ್ಲಿ ಕೇವಲ 133 ಕೊರೋನಾ ಕೇಸ್‌!

ರಾಜ್ಯದಲ್ಲಿ ಭಾನುವಾರ 133 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ತಾಂತ್ರಿಕ ಸಮಸ್ಯೆಯಿಂದ ಹೊಸ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

133 new coronavirus cases on june 27th in karnataka gvd

ಬೆಂಗಳೂರು (ಜೂ.27): ರಾಜ್ಯದಲ್ಲಿ ಭಾನುವಾರ 133 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ತಾಂತ್ರಿಕ ಸಮಸ್ಯೆಯಿಂದ ಹೊಸ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಸತತ ಎರಡನೇ ದಿನ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್‌) ತಾಂತ್ರಿಕ ಸಮಸ್ಯೆ ಮುಂದುವರೆದಿದೆ. 32 ಸಾವಿರಷ್ಟುಸೋಂಕು ಪರೀಕ್ಷೆಗಳು ನಡೆದಿದ್ದರೂ ಕೂಡಾ ಹೊಸ ಪ್ರಕರಣಗಳು ಭಾನುವಾರ 133 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 517 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವಿನ ವರದಿಯಾಗಿಲ್ಲ.

ಸದ್ಯ 4438 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 131 ಪತ್ತೆಯಾಗಿವೆ. ಉಳಿದಂತೆ ಬಳ್ಳಾರಿ, ಉಡುಪಿಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಕಳೆದ ವಾರ ಆರಂಭದಿಂದಲೂ 700-800 ಆಸುಪಾಸಿನಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ, ಶನಿವಾರ ತಾಂತ್ರಿಕ ಸಮಸ್ಯೆಯಿಂದ 253 ಪ್ರಕರಣಗಳು ವರದಿಯಾಗಿದ್ದವು. ಬಿಟ್ಟು ಹೋಗಿರುವ ಹೊಸ ಪ್ರಕರಣಗಳನ್ನು ಮುಂದಿನ ದಿನಗಳಲ್ಲಿ ಸೇರ್ಪಡೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Covid Crisis: ಕರ್ನಾಟಕದಲ್ಲಿ ಒಮಿಕ್ರೋನ್‌ ಉಪತಳಿ ಪತ್ತೆ

ಯಥಾಸ್ಥಿತಿಯಲ್ಲಿ ಪಾಸಿಟಿವಿಟಿ ದರ: ನಗರದಲ್ಲಿ ಭಾನುವಾರ 131 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.3.46ರಷ್ಟಿದೆ. 487 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರದಿಯಾಗಿಲ್ಲ. ನಗರದಲ್ಲಿ ಸದ್ಯ 4,211 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 72 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 13 ಮಂದಿ ಐಸಿಯು ಮತ್ತು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 21,102 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.

Covid Crisis: ಟೆಸ್ಟಿಂಗ್‌, ಜಿನೋಮ್‌ ಸೀಕ್ವೆನ್ಸಿಂಗ್‌ ಹೆಚ್ಚಿಸಿ: ಕೇಂದ್ರ

2,545 ಮಂದಿ ಮೊದಲ ಡೋಸ್‌, 4,334 ಮಂದಿ 2ನೇ ಡೋಸ್‌ ಮತ್ತು 14,223 ಮಂದಿ 3ನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 15,649 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 12,187 ಆರ್‌ಟಿಪಿಸಿಆರ್‌ ಹಾಗೂ 3462 ಮಂದಿ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಭಾನುವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್‌ ಪ್ರದೇಶ ಸೃಷ್ಟಿಯಾಗಿಲ್ಲ. ಮಹದೇವಪುರ ವಲಯದಲ್ಲಿ 31, ಆರ್‌ಆರ್‌ ನಗರ ವಲಯದಲ್ಲಿ 2 ಸೇರಿದಂತೆ ಒಟ್ಟು 33 ಸಕ್ರಿಯ ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Latest Videos
Follow Us:
Download App:
  • android
  • ios