Asianet Suvarna News Asianet Suvarna News

MLC ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

42ನೇ ಎಸಿಎಂಎಂ ನ್ಯಾಯಾಧೀಶರ ಕೋರಮಂಗಲದ ಎನ್‌ಜಿವಿ ನಿವಾಸದಲ್ಲಿ ಸೂರಜ್ ರೇವಣ್ಣರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದಾರೆ. 

14 days judicial custody to jds mlc suraj revanna mrq
Author
First Published Jun 23, 2024, 8:35 PM IST

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣ (MLC Suraj Revanna)  ಅವರನ್ನು ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹಾಸನದಲ್ಲಿ ಬಂಧನಕ್ಕೊಳಗಾಗಿದ್ದ ಸೂರಜ್ ರೇವಣ್ಣರಿಗೆ ಅಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಹಾಸನದಲ್ಲಿ ವೈದ್ಯರು ಸೂರಜ್ ರೇವಣ್ಣಗೆ ಮಧುಮೇಹ, ರಕ್ತದೊತ್ತಡ ಸೇರಿದಂತೆ 15ಕ್ಕೂ ಅಧಿಕ ಪರೀಕ್ಷೆಗಳನ್ನು ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ವಿಚಾರಣೆಗೆ ಒಳಪಡಿಸಿ ಬೆಂಗಳೂರಿಗೆ ಕರೆತರಲಾಗಿತ್ತು.  42ನೇ ಎಸಿಎಂಎಂ ನ್ಯಾಯಾಧೀಶರ ಕೋರಮಂಗಲದ ಎನ್‌ಜಿವಿ ನಿವಾಸದಲ್ಲಿ ಸೂರಜ್ ರೇವಣ್ಣರನ್ನು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದಾರೆ. 

 ಶನಿವಾರ ಸಂಜೆ ಎಂಎಲ್‌ಸಿ ರೇವಣ್ಣ ವಿರುದ್ದ ಅಧಿಕೃತವವಾಗಿ ದೂರು ದಾಖಲಾಗಿತ್ತು, ಸಂತ್ರಸ್ತ ಯುವಕ ಶಿವಕುಮಾರ್ ವಿರುದ್ಧ ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದ ಸೂರಜ್ ರೇವಣ್ಣ ಅವರರನ್ನು ಅಲ್ಲಿಯೇ ಬಂಧಿಸಲಾಗಿತ್ತು. ಇತ್ತ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಪ್ರಜ್ವಲ್, ಸೂರಜ್‌, ಯಡಿಯೂರಪ್ಪ ಇವರಿಗೆಲ್ಲ ಏನು ಅನಿಸೊಲ್ವ? ಮುಜುಗರ ಆಗೊಲ್ವ? ಪ್ರಿಯಾಂಕ್ ಖರ್ಗೆ

ಸಂತ್ರಸ್ತನ ದೂರೇನು?

ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‌ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ಅಸಹಜ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377,342,506 ಅಡಿ ಕೇಸ್ ದಾಖಲಾಗಿದೆ. ಸೂರಜ್ ರೇವಣ್ಣ ಪ್ರಕರಣದಿಂದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ಮಾಜಿ ಸಚಿವ ಜಿಟಿ ದೇವೆಗೌಡರು ಸೇರಿದಂತೆ ಜೆಡಿಎಸ್ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ; ಸಾಕ್ಷಿ ಕೊಡಲು ಬಂದು ಪೊಲೀಸರಿಗೆ ತಾನಾಗಿಯೇ  ಸಿಕ್ಕಿಬಿದ್ದ ಸೂರಜ್ ರೇವಣ್ಣ!

Latest Videos
Follow Us:
Download App:
  • android
  • ios