Corona Crisis: ಕರ್ನಾಟಕದಲ್ಲಿ 1465 ಮಂದಿಗೆ ಕೊರೋನಾ ಸೋಂಕು: 2 ಸಾವು
ರಾಜ್ಯದಲ್ಲಿ ಮಂಗಳವಾರ 1465 ಕೊರೋನಾ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1295 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ. 24 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.6 ರಷ್ಟು ದಾಖಲಾಗಿದೆ.
ಬೆಂಗಳೂರು (ಆ.24): ರಾಜ್ಯದಲ್ಲಿ ಮಂಗಳವಾರ 1465 ಕೊರೋನಾ ಸೋಂಕು ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1295 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿತರು ಸಾವಿಗೀಡಾಗಿದ್ದಾರೆ. 24 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.6 ರಷ್ಟು ದಾಖಲಾಗಿದೆ. ಸೋಮವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆ ಆರು ಸಾವಿರ ಹೆಚ್ಚು ನಡೆದಿವೆ. ಹೀಗಾಗಿ, ಹೊಸ ಪ್ರಕರಣಗಳು 197 ಏರಿಕೆಯಾಗಿವೆ. (ಸೋಮವಾರ 1268 ಪ್ರಕರಣಗಳು, ಎರಡು ಸಾವು).
ಧಾರವಾಡದಲ್ಲಿ 84 ವರ್ಷದ ವೃದ್ಧ, ಬಳ್ಳಾರಿಯಲ್ಲಿ 49 ವರ್ಷದ ಪುರುಷ ಸಾವಿಗೀಡಾಗಿದ್ದಾರೆ. ಸದ್ಯ ಸಕ್ರಿಯ ಸೋಂಕಿತರ ಸಂಖ್ಯೆ 10,709ಕ್ಕೆ ಏರಿಕೆಯಾಗಿವೆ. ಈ ಪೈಕಿ 69 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಐಸಿಯು, 5 ಮಂದಿ ಆಕ್ಸಿಜನ್, 59 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 10,640 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ.
Corona Crisis: ಕೋವಿಡ್ ದಾಖಲಿಗೆ ತಾಂತ್ರಿಕ ಸಮಸ್ಯೆ: ಕಡಿಮೆ ಕೇಸ್ ಪತ್ತೆ
ಬೆಂಗಳೂರಿನಲ್ಲಿ ಅಲ್ಪ ಪ್ರಮಾಣದಲ್ಲಿ ಕುಸಿದ ಕೊರೋನಾ ಪಾಸಿಟಿವಿಟಿ: ನಗರದಲ್ಲಿ ಮಂಗಳವಾರ 987 ಜನರಲ್ಲಿ ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.5.91 ದಾಖಲಾಗಿದೆ. 799 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 7651 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 63 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 23 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಟ್ಟು 6914 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 216 ಮಂದಿ ಮೊದಲ ಡೋಸ್, 427 ಮಂದಿ ಎರಡನೇ ಡೋಸ್ ಮತ್ತು 6271 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 16,159 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 12,965 ಆರ್‌ಟಿಪಿಸಿಆರ್ ಹಾಗೂ 3,194 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಮಂಗಳವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 10 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ದ.ಕ.ದಲ್ಲಿ12 ಮಂದಿಗೆ ಕೊರೋನಾ: ದ.ಕ. ಜಿಲ್ಲೆಯಲ್ಲಿ ಮಂಗಳವಾರ 12 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 72 ಆಗಿದೆ. ಜಿಲ್ಲೆಯಲ್ಲಿ ಇದುವರೆಗೆ 1,36,548 ಮಂದಿ ಸೋಂಕಿತರಾಗಿದ್ದು, ಅವರಲ್ಲಿ 1,34,617 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1859 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಬುಲೆಟಿನ್ ತಿಳಿಸಿದೆ.
ಉಚಿತ 3ನೇ ಡೋಸ್ ನೀಡಿದರೂ ಜನ ಪಡೆಯುತ್ತಿಲ್ಲ: ಸಚಿವ ಸುಧಾಕರ್
ಎಲ್ಲಿ, ಎಷ್ಟು ಕೇಸ್?: ಮಂಗಳವಾರದ ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 987 ಪ್ರಕರಣ ಪತ್ತೆಯಾಗಿವೆ. ಉಳಿದಂತೆ ಮೈಸೂರು 99, ಹಾಸನ 73 ಮಂದಿಗೆ ಸೋಂಕು ತಗುಲಿದೆ. 13 ಜಿಲ್ಲೆಗಳಲ್ಲಿ ಬೆರಳೆಣಿಕೆ, ಗದಗದಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.