‘ಕಾವೇರಿ’ ಹಾಗೂ ‘ಕನ್ನಿಕೆ’ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿ ಪೂರ್ಣಗೊಳಿಸಲು ಕಾವೇರಿ ನೀರಾವರಿ ನಿಗಮಕ್ಕೆ ಮತ್ತೆ 15 ದಿನಗಳ ಕಾಲಾವಕಾಶ ನೀಡಿದ ಹೈಕೋರ್ಟ್‌.  

ಬೆಂಗಳೂರು(ಏ.06): ಒಳಚರಂಡಿ ನೀರು ಹರಿವಿನಿಂದ ಕೊಡಗು ಜಿಲ್ಲೆ ಭಾಗಮಂಡಲದಲ್ಲಿ ‘ಕಾವೇರಿ’ ಹಾಗೂ ‘ಕನ್ನಿಕೆ’ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿ ಪೂರ್ಣಗೊಳಿಸಲು ಕಾವೇರಿ ನೀರಾವರಿ ನಿಗಮಕ್ಕೆ ಹೈಕೋರ್ಟ್‌ ಮತ್ತೆ 15 ದಿನಗಳ ಕಾಲಾವಕಾಶ ನೀಡಿದೆ. 

ಭಾಗಮಂಡಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲ್ಸೇತುವೆ ನಿರ್ಮಿಸುವ ಯೋಜನೆಯಿಂದ ನದಿ ಮಾಲಿನ್ಯವಾಗುತ್ತಿದೆ ಮತ್ತು ನದಿಪಾತ್ರದಲ್ಲಿ ಒಳಚರಂಡಿ ನೀರು ಹರಿಯುತ್ತಿದೆ. ಆದ್ದರಿಂದ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸಲು ಆದೇಶಿಸುವಂತೆ ಕೋರಿ ಸ್ಥಳೀಯ ನಿವಾಸಿ ಎಸ್‌.ಇ. ಜಯಂತ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. 

ಪ್ರೀತಿ ಮಾಡಲು ಅನುಮತಿ, ಅಪ್ರಾಪ್ತರ ಸೆಕ್ಸ್‌ಗೆ ಅನುಮತಿ ಇಲ್ಲ; ಹೈಕೋರ್ಟ್‌

ವಿಚಾರಣೆ ವೇಳೆ ನಿಗಮದ ಪರ ವಕೀಲರು ಹಾಜರಾಗಿ, ಭಾಗಮಂಡಲದಲ್ಲಿ ಕಾವೇರಿ ಮತ್ತು ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯ ಸ್ವಚ್ಛಗೊಳಿಸುವ ಕಾರ್ಯ ನಡೆಸಲು ಗುತ್ತಿಗೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಳಿಸಲು 15 ದಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಆ ಮನವಿಗೆ ಒಪ್ಪಿದ ನ್ಯಾಯಪೀಠ, ಕಾಮಗಾರಿ ಪೂರ್ಣಗೊಳಿಸಲು 15 ದಿನ ಕಾವಲಾವಾಶ ನೀಡಿ ವಿಚಾರಣೆ ಮುಂದೂಡಿತು.

ಕಾವೇರಿ ಹಾಗೂ ಕನ್ನಿಕೆ ನದಿಪಾತ್ರದಲ್ಲಿ ಉಂಟಾಗಿರುವ ಮಾಲಿನ್ಯವನ್ನು ಸ್ವಚ್ಛಗೊಳಿಸುವ ಕಾಮಗಾರಿಯನ್ನು ಎರಡು ತಿಂಗಳ ಅವಧಿಯಲ್ಲಿ (ಮಾರ್ಚ್‌ 24ರೊಳಗೆ) ಪೂರ್ಣಗೊಳಿಸುವಂತೆ ಕಾವೇರಿ ನಿರಾವರಿ ನಿಗಮಕ್ಕೆ 2023ರ ಫೆ.6ರಂದು ಹೈಕೋರ್ಟ್‌ ಆದೇಶಿಸಿತ್ತು.