ಚಾಮರಾಜನಗರ, (ಡಿ.24): ಕೊರೋನಾ ಭೀತಿ ನಡುವೆಯೂ ಶಾಲೆಗಳನ್ನ ಮತ್ತೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಮಧ್ಯೆಯೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹೋಲಿ ಕ್ರಾಸ್ ನರ್ಸಿಂಗ್ ಸ್ಕೂಲ್​ನ 15 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ.

ವಿದ್ಯಾರ್ಥಿಗಳಿಗೆ ನೆಗಡಿ, ತಲೆನೋವು, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ವಿದ್ಯಾರ್ಥಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶಾಲೆ ಆರಂಭದ ಬಗ್ಗೆ ಸುರೇಶ್ ಕುಮಾರ್ ಸ್ಪಷ್ಟನೆ...!

ಕೇರಳ ಸೇರಿದಂತೆ ಹೊರರಾಜ್ಯಗಳಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಂದಿದ್ದರು ಎನ್ನಲಾಗಿದೆ. ಸದ್ಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆ ವಿದ್ಯಾರ್ಥಿಗಳ ಬಗ್ಗೆ ನಿಗಾ ವಹಿಸಿದ್ದಾರೆ. ಆಸ್ಪತ್ರೆ, ನರ್ಸಿಂಗ್ ಶಾಲೆಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.

ವಿದ್ಯಾರ್ಥಿಗಳು ಒಂದೇ ಕಡೆ ಇದ್ದಿದ್ದರಿಂದ ಕೊರೋನಾ ಸೋಂಕು ಹರಡಿದೆ. ರೋಗ ಲಕ್ಷಣಗಳು ಇತರರಲ್ಲಿ ಕಾಣಿಸಿಕೊಂಡಿಲ್ಲ. ಹಿತದೃಷ್ಟಿಯಿಂದ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಾಗಿದೆ ಎಂದು ಚಾಮರಾಜನಗರ ಡಿಹೆಚ್​ಓ ಡಾ. ರವಿ ಮಾಹಿತಿ ನೀಡಿದ್ದಾರೆ.