2 ದಿನದಲ್ಲಿ ಎನ್ನೆಚ್ಚೆಂ ನೌಕರರ ವೇತನ 15% ಹೆಚ್ಚಳ: ಸಚಿವ ಸುಧಾಕರ್‌

ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ.15ರಷ್ಟು ವೇತನ ಹೆಚ್ಚಳದ ಆದೇಶ ಹೊರಬೀಳಲಿದೆ. 

15 Percent Increase in Salary of NHM Employees in 2 days Says Minister Dr K Sudhakar gvd

ವಿಧಾನಸಭೆ (ಫೆ.24): ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 25 ಸಾವಿರಕ್ಕೂ ಹೆಚ್ಚು ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ಶೇ.15ರಷ್ಟು ವೇತನ ಹೆಚ್ಚಳದ ಆದೇಶ ಹೊರಬೀಳಲಿದೆ. ಜತೆಗೆ ಇನ್ನು ಎರಡು ತಿಂಗಳಲ್ಲಿ ಅವರಿಗೆ ಕನಿಷ್ಠ ವೇತನ ಜಾರಿಗೊಳಿಸುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗುರುವಾರ ಬಿಜೆಪಿ ಸದಸ್ಯೆ ಕೆ.ಪೂರ್ಣಿಮಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಎನ್‌ಎಚ್‌ಎಂ ಯೋಜನೆಗೆ 41 ಸಾವಿರ ನೌಕರರ ಅಗತ್ಯವಿದೆ. ಆದರೆ, ಸದ್ಯ 21,542 ಜನ ಗುತ್ತಿಗೆ ಆಧಾರದಲ್ಲಿ ಮತ್ತು 3,494 ಜನ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಎಚ್‌ಎಚ್‌ಎಂ ನೌಕರರ ಸಂಘದೊಂದಿಗೆ ಚರ್ಚೆ ನಡೆಸಿ ಅವರ ರಜೆ ಸೌಲಭ್ಯ, ಜಿಲ್ಲೆಯೊಳಗೆ ವರ್ಗಾವಣೆ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಿದೆ. ಜತೆಗೆ ಅವರ ಬೇಡಿಕೆಯಂತೆ ಶೇ.15ರಷ್ಟುವೇತನ ಹೆಚ್ಚಿಸಲು ಮುಖ್ಯಮಂತ್ರಿ ಅವರು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. ಇನ್ನು ಎರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ ಎಂದರು.

ಬಿಜೆಪಿಗೆ ತುಮಕೂರು ಅಭ್ಯರ್ಥಿ ನಾನೇ: ಸೊಗಡು ಶಿವಣ್ಣ

ಅಲ್ಲದೆ, ಈ ನೌಕರರಿಗೆ ಕನಿಷ್ಠ ವೇತನ ನೀಡುವ ಪ್ರಕ್ರಿಯೆಯನ್ನೂ ಸರ್ಕಾರ ನಡೆಸಿದೆ. ಇನ್ನೆರಡು ತಿಂಗಳಲ್ಲಿ ಅದು ಜಾರಿಯಾಗಬಹುದು. ಇದರಿಂದ ಅವರ ಮೂಲವೇತನ ಹೆಚ್ಚಳವಾಗಲಿದೆ. ಆದರೆ, ಎಚ್‌ಎಚ್‌ಎಂ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.50:50ರ ಅನುಪಾತದ ಅನುದಾನದಲ್ಲಿ ನಡೆಯುತ್ತಿರುವ ಯೋಜನೆ. ಇಂತಹ ಯೋಜನೆಗಳು ಅಗತ್ಯ ಇರುವವರೆಗೆ ನಡೆಯುತ್ತವೆ. ಹಾಗಾಗಿ ಈ ನೌಕರರನ್ನು ಕಾಯಂ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ಸ್ಪರ್ಧೆ ತೀರ್ಮಾನಿಸಲು ಬಿಎಸ್‌ವೈ ಯಾರು?: ಸಿದ್ದರಾಮಯ್ಯ

ಇದಕ್ಕೂ ಮುನ್ನ ಮಾತನಾಡಿದ ಶಾಸಕಿ ಪೂರ್ಣಿಮಾ, ಎಚ್‌ಎಚ್‌ಎಂ ನೌಕರರಿಗೆ ಸಂಬಂಧಿಸಿದ ಗುತ್ತಿಗೆ ಏಜೆನ್ಸಿಗಳು ಸರ್ಕಾರ ನೀಡುವ ವೇತನವನ್ನು ಸರಿಯಾಗಿ ನೀಡುತ್ತಿಲ್ಲ. ಪಿಎಫ್‌, ಇಎಸ್‌ಐ ಮೊತ್ತವನ್ನು ಕಟ್ಟುತ್ತಿಲ್ಲ. ಹಾಗಾಗಿ ನೇರವಾಗಿ ನೌಕರರ ಖಾತೆಗೆ ಹಣ ವರ್ಗಾವಣೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಇದಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲ ಸದಸ್ಯರೂ ದನಿಗೂಡಿಸಿದರು. ಪ್ರಸ್ತುತ ಗುತ್ತಿಗೆ ನೌಕರರಿಗೆ ಸರ್ಕಾರವೇ ನೇರವಾಗಿ ಗುತ್ತಿಗೆ ಪಡೆದು ವೇತನ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹೊರ ಗುತ್ತಿಗೆ ನೌಕರರನ್ನೂ ಸರ್ಕಾರದಿಂದಲೇ ನೇಮಿಸಿಕೊಂಡು ವೇತನ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Latest Videos
Follow Us:
Download App:
  • android
  • ios