Asianet Suvarna News Asianet Suvarna News

ಕರ್ನಾಟಕದಲ್ಲಿ ಕೊರೋನಾ ದಾಖಲೆ ಪ್ರಮಾಣದಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣಕ್ಕಿಂತಲೂ  ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಿದೆ. 

1565 New Covid19 Cases and  2363 recovery In Karnataka On Nov 15th
Author
Bengaluru, First Published Nov 15, 2020, 10:16 PM IST

ಬೆಂಗಳೂರು, (ನ.15): ರಾಜ್ಯದಲ್ಲಿ  ಇಂದು (ಭಾನುವಾರ) ಹೊಸದಾಗಿ ಕೇವಲ  1565 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು,  ಒಟ್ಟು ಸೋಂಕಿತರ ಸಂಖ್ಯೆ 8,61,647ಕ್ಕೆ ಏರಿಕೆಯಾಗಿದೆ. 

"

ಮತ್ತೊಂದೆಡೆ ಸೋಂಕಿನ ಪ್ರಮಾಣಕ್ಕಿಂತಲೂ 2,363 ಜನರು ಗುಣವಾಗಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಸೆಂಟರ್​​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೂ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ 8,22,953ಕ್ಕೆ ಏರಿಕೆಯಾಗಿದೆ.

ಭಾರತೀಯರಿಗೆ ಸಿಗಲಿದೆ ತಿಂಗಳಲ್ಲಿ ಕೋವಿಡ್ ಲಸಿಕೆ? ಯಾವುದದು..?

ಇದರೊಂದಿಗೆ ಸದ್ಯ ರಾಜ್ಯದಲ್ಲಿ 27,146 ಪ್ರಕರಣಗಳು ಸಕ್ರಿಯವಾಗಿದ್ದು, ಆ ಪೈಕಿ ಗಂಭೀರ ರೋಗಲಕ್ಷಣಗಳಿರುವ 746 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಒಂದೇ ದಿನ 21 ಜನ ಕೊರೋನಾಗೆ ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 11,529ಕ್ಕೆ ತಲುಪಿದೆ. 

ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣವು ಶೇ.1.57ರಷ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. 

ಕೊರೋನಾ ವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 17075 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 82531 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow Us:
Download App:
  • android
  • ios