ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು, (ಮಾ.19): ರಾಜ್ಯದಲ್ಲಿ ಸಹ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು (ಶುಕ್ರವಾರ) ಸಹ ರಾಜ್ಯದಲ್ಲಿ ಒಂದೇ ದಿನ 1587 ಜನರಿಗೆ ಸೋಂಕು ತಗುಲಿದ್ದು, 10 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 ಕ್ಕೆ ಏರಿಕೆಯಾಗಿದ್ರೆ, ಇದುವರೆಗೆ 12,425 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ: ಸಾರ್ವಜನಿಕರಿಗೆ ಸಿಎಂ ವಿಶೇಷ ಮನವಿ

ಇನ್ನು ಕಳೆದ 24 ಗಂಟೆಗಳಲ್ಲಿ 869 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಒಟ್ಟು 9,42,178 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 1037 ಜನರಿಗೆ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8623 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿಂದು 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 12,067 ಸಕ್ರಿಯ ಪ್ರಕರಣಗಳು ಇದ್ದು 131 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.