ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಜೊರಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಏ.17ರ ಅಂಕಿ ಸಂಖ್ಯೆ ಇಲ್ಲಿದೆ..

ಬೆಂಗಳೂರು, (ಏ.17): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿವೆ. ಇಂದು (ಶನಿವಾರ) 13099 ಱಪಿಡ್ ಆಯಂಟಿಜೆನ್ ಟೆಸ್ಟ್ ಹಾಗೂ 1,30,209 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,43,308 ಕೊರೊನಾ ಟೆಸ್ಟ್​ಗಳನ್ನು ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಪೈಕಿ ಕಳೆದ 24 ಗಂಟೆಗಳಲ್ಲಿ 17,489 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 11,41,998ಕ್ಕೆ ಏರಿಕೆಯಾಗಿದೆ.

ಕರ್ನಾಟಕಕ್ಕೆ ಕೊರೋನಾ ಕಂಟಕ, ಈ ವಾರ ಯಾರು ಬಿಗ್‌ಬಾಸ್ ನಿರೂಪಕ? ಏ.17ರ ಟಾಪ್ 10 ಸುದ್ದಿ!

ಶನಿವಾರ ಸೋಂಕಿನಿಂದ ಗುಣಮುಖರಾಗಿ 5565 ಮಂದಿ ಡಿಸ್ಚಾರ್ಜ್ ಆಗಿದ್ದು ಈವರೆಗೆ ಒಟ್ಟು 10,09,549 ಜನರು ಸೋಂಕಿನಿಂದ ಗುಣಮುಖರಾದಂತಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ಸೋಂಕಿನಿಂದಾಗಿ 80 ಮಂದಿ ಸಾವನ್ನಪ್ಪಿದ್ದು ಈವರೆಗೆ ರಾಜ್ಯದಲ್ಲಿ 13,270 ಮಂದಿ ಸಾವನ್ನಪ್ಪಿದಂತಾಗಿದೆ.

ಸದ್ಯ ರಾಜ್ಯದಲ್ಲಿ 1,19,160 ಸಕ್ರಿಯ ಪ್ರಕರಣಗಳಿದ್ದು ಈ ಪೈಕಿ 589 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್​ನಲ್ಲಿ ತಿಳಿಸಿದೆ.