ಕರ್ನಾಟಕದಲ್ಲಿ ಮತ್ತೆ ಕೊರೋನಾ ಅಟ್ಟಹಾಸ: ಇಲ್ಲಿದೆ ಮಾ.20ರ ಅಂಕಿ-ಸಂಖ್ಯೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಆತಂಕ ಮೂಡಿಸಿದೆ.
ಬೆಂಗಳೂರು, (ಮಾ.20): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು, ಇಂದು (ಶನಿವಾರ) 1,798 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,68,487ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 7 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ದೇಶದಲ್ಲಿ ಮತ್ತೆ ಕೋವಿಡ್ ಹೆಚ್ಚಳ: ಒಂದೇ ದಿನದಲ್ಲಿ ದಾಖಲೆ ಬರೆದ ಕೊರೋನಾ
ಇನ್ನು ಬೆಂಗಳೂರಿನಲ್ಲಿ ಶನಿವಾರ 1,186 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,16,633ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಆರು ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಶನಿವಾರ 1,030 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,43,208ಕ್ಕೆ ಏರಿಕೆಯಾಗಿದೆ. ಇನ್ನು 12,828 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 134 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.