Asianet Suvarna News Asianet Suvarna News

ಚಿತ್ರನಟ ಮಾಸ್ಟರ್ ಆನಂದ್‌ಗೆ 18.50 ಲಕ್ಷ ವಂಚನೆ: ಲೀಪ್ ವೆಂಚರ್ಸ್ ಕಂಪನಿ ವಿರುದ್ಧ ದೂರು

ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ಮುಂಗಡ ಹಣ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

18 50 lakh fraud to actor Master Anand Complaint against Leap Ventures Company gvd
Author
First Published Jun 26, 2023, 9:04 AM IST

ಬೆಂಗಳೂರು (ಜೂ.26): ಚಿತ್ರನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರಿಗೆ ನಿವೇಶನ ನೀಡುವುದಾಗಿ 18.50 ಲಕ್ಷ ಮುಂಗಡ ಹಣ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 2020ರ ಸೆಪ್ಟಂಬರ್‌ನಿಂದ 2021 ರ ಅಕ್ಟೋಬರ್‌ನ ಅವಧಿಯಲ್ಲಾದ ವಂಚನೆಗೆ ಸಂಬಂಧಿಸಿದಂತೆ ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ವಿರುದ್ದ ಮಾಸ್ಟರ್ ಆನಂದ್ ಚಂದ್ರಲೇಔಟ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಕೊಮ್ಮಘಟ್ಟದ ರಾಮಸಂದ್ರ ಗ್ರಾಮದದಲ್ಲಿ ಆನಂದ್ ಶೂಟಿಂಗ್‌ಗಾಗಿ ತೆರಳಿದ್ದ ವೇಳೆ ನಿವೇಶನಗಳನ್ನು ನೋಡಿದ್ದರು. ಮನಿಕಾ ಕೆಂ ಎಂ ಇಂದ ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ರು . ಆ ಬಳಿಕ ರಾಮಸಂದ್ರದ 2000 ಅಡಿ ವಿಸ್ತೀರ್ಣದ ನಿವೇಶನವನ್ನು ಮಲ್ಟಿ ಲೀಪ್ ವೆಂಚರ್ಸ್ ಕಂಪನಿ ತೋರಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿ ಹಂತ ಹಂತವಾಗಿ 18.50 ಲಕ್ಷ ಮುಂಗಡ ಹಣವನ್ನು ಕಂಪನಿಗೆ ನೀಡಿದ್ದೆ. ಕಂಪನಿಯು ಮಾಸ್ಟರ್ ಆನಂದ್ ಹಾಗು ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಖರಾರು ಪತ್ರವನ್ನು ಮಾಡಿಕೊಟ್ಟಿತ್ತು. 

ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ಮಧ್ಯೆ ಜಗ​ಳ: ಪೊಲೀಸ್‌ ಬಂದೋ​ಬಸ್ತ್ ಬಿಸಿ

ಈ ನಡುವೆ ನಿವೇಶನವನ್ನ ಕಂಪನಿ  ಬೇರೆಯವರಿಗೆ ಮಾರಾಟ ಮಾಡಿದ್ದು, ಈ ಬಗ್ಗೆ ವಿಚಾರಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣ ಸಹ ವಾಪಸ್ ಮಾಡಲಿಲ್ಲ. ಇನ್ನು ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದು, ಬಿಯುಡಿಎಸ್ ಕಾಯ್ದೆ (ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) 2019 ರ ಅಡಿ ಆರೋಪಿಗಳ ವಿರುದ್ದ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

Follow Us:
Download App:
  • android
  • ios