Asianet Suvarna News Asianet Suvarna News

ಮಾಜಿ ಐಪಿಎಸ್‌ ಅಧಿಕಾರಿ, ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ ಸೇರ್ಪಡೆ

ಓರ್ವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಚಿಕ್ಕಮಗಳೂರಿನ ಹಲವು ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದಾರೆ.

2 Ex MLas And Former IPS Officer Join Congress
Author
Bengaluru, First Published Oct 10, 2018, 11:07 AM IST
  • Facebook
  • Twitter
  • Whatsapp

ಬೆಂಗಳೂರು :  ತರಿಕೇರೆ ಮಾಜಿ ಶಾಸಕರಾದ ಶ್ರೀನಿವಾಸ್‌, ಟಿ.ಎಚ್‌. ಶಿವಶಂಕರಪ್ಪ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಶಿವಪ್ರಸಾದ್‌ ಸೇರಿದಂತೆ ಚಿಕ್ಕಮಗಳೂರಿನ ಹಲವು ಮುಖಂಡರು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಹಿರಿಯ ಮುಖಂಡರು ಕಾಂಗ್ರೆಸ್‌ ಸೇರ್ಪಡೆಗೊಂಡರು.

ಈ ವೇಳೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡ ದಿನೇಶ್‌ ಗುಂಡೂರಾವ್‌, ಶ್ರೀನಿವಾಸ್‌ ಅವರು ಕಾಂಗ್ರೆಸ್‌ ಪಕ್ಷದಲ್ಲೇ ಇದ್ದು ಪಕ್ಷದ ಸಂಘಟನೆಗಾಗಿ ದುಡಿದವರು. ಇಬ್ಬರೂ ಶಾಸಕರಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೆ ಕೆಲ ಭಿನ್ನಾಭಿಪ್ರಾಯಗಳಿಂದಾಗಿ ಪಕ್ಷ ಬಿಟ್ಟು ಹೋಗಿದ್ದರು. ಮತ್ತೆ ಮಾತೃಪಕ್ಷಕ್ಕೆ ವಾಪಸ್ಸಾಗಿದ್ದು, ನಾಯಕರ ಪಕ್ಷ ಸೇರ್ಪಡೆಯಿಂದ ಈ ಭಾಗದಲ್ಲಿ ಪಕ್ಷ ಮತ್ತಷ್ಟುಸದೃಢಗೊಂಡಿದೆ. ನಿವೃತ್ತ ಐಪಿಎಸ್‌ ಅಧಿಕಾರಿ ಶಿವಪ್ರಸಾದ್‌ ಅವರಿಂದ ಪಕ್ಷ ಮತ್ತಷ್ಟುಸದೃಢಗೊಳ್ಳಲಿದೆ ಎಂದು ಹೇಳಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಕೆಪಿಸಿಸಿ ಉಪಾಧ್ಯಕ್ಷ ಡಾ.ಬಿ.ಎಲ್‌. ಶಂಕರ್‌, ಚಿಕ್ಕಮಗಳೂರು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ. ವಿಜಯಕುಮಾರ್‌ ಹಾಜರಿದ್ದರು. ದಿನೇಶ್‌ ಹುಟ್ಟುಹಬ್ಬ:  ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಸೇರಿ ಅದ್ಧೂರಿಯಾಗಿ ಸಂಭ್ರಮಾಚರಣೆ ನಡೆಸಿದರು.

ಪಕ್ಷದ ಕಾರ್ಯಕರ್ತರು 25 ಕೆ.ಜಿ. ತೂಕದ ಕೇಕ್‌ ಕತ್ತರಿಸುವ ಮೂಲಕ ತಮ್ಮ ನಾಯಕರ ಹುಟ್ಟು ಹಬ್ಬ ಆಚರಿಸಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಅವರು ಸಿಹಿ ತಿನ್ನಿಸಿ ದಿನೇಶ್‌ ಗುಂಡೂರಾವ್‌ ಅವರಿಗೆ ಶುಭಾಶಯ ಕೋರಿದರು.

ಇನ್ನು ದಿನವಿಡೀ ದಿನೇಶ್‌ಗುಂಡೂರಾವ್‌ ಅವರನ್ನು ಭೇಟಿ ಮಾಡಿ ನಾಯಕರು ಹಾಗೂ ಕಾರ್ಯಕರ್ತರು ಹುಟ್ಟು ಹಬ್ಬದ ಶುಭಾಶಯ ತಿಳಿಸಿದರು. ಸಚಿವರಾದ ಕೃಷ್ಣ ಬೈರೇಗೌಡ, ಕೆ.ಜೆ. ಜಾಜ್‌ರ್‍, ಶಾಸಕರಾದ ಎಸ್‌.ಟಿ. ಸೋಮಶೇಖರ್‌, ಮುನಿರತ್ನ, ಬೈರತಿ ಬಸವರಾಜು, ಸಂಸದ ಡಿ.ಕೆ. ಸುರೇಶ್‌, ಶಾಸಕಿ ಸೌಮ್ಯಾರೆಡ್ಡಿ ಸೇರಿದಂತೆ ಹಲವರು ಭೇಟಿ ಮಾಡಿ ಶುಭಾಶಯ ಕೋರಿದರು.

Follow Us:
Download App:
  • android
  • ios