ಕರ್ನಾಟಕದಲ್ಲಿ ಕೊರೋನಾ ಮತ್ತಷ್ಟು ಇಳಿಕೆ: ಪಾಸಿಟಿವಿಟಿ ದರ ಶೇಕಡ 1.34
* ಕರ್ನಾಟಕದಲ್ಲಿ ಕೊರೋನಾ ಭಾರಿ ಇಳಿಕೆ
* 2082 ಜನರಿಗೆ ಸೋಂಕು, 86 ಮಂದಿ ಸಾವು
* ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.34
ಬೆಂಗಳೂರು, (ಜೂನ್.03): ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 2082 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,52,079 ಕ್ಕೆ ಏರಿಕೆಯಾಗಿದೆ.
ಇನ್ನು 86 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,308 ಜನ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಅನ್‌ಲಾಕ್ 3.0 ಮಾರ್ಗಸೂಚಿ ಪ್ರಕಟ: ಏನಿರುತ್ತೆ? ಏನಿರಲ್ಲ?
ಇವತ್ತು 7751 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದರೊಂದಿಗೆ 27,68,632 ಜನ ಗುಣಮುಖರಾಗಿದ್ದಾರೆ. 48,116 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.34 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ) 481 ಜನರಿಗೆ ಸೋಂಕು ತಗುಲಿದ್ದು, 10 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 4484 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು, 19,411 ಸಕ್ರಿಯ ಪ್ರಕರಣಗಳಿವೆ.