Asianet Suvarna News Asianet Suvarna News

ಶಾಲೆಯಿಂದ ಹೊರಗುಳಿದ 21400 ಮಕ್ಕಳ ಪತ್ತೆ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ 24 ಸಾವಿರಕ್ಕೂ ಅಧಿಕ ಮಕ್ಕಳ ಪೈಕಿ 21,407 ಮಕ್ಕಳನ್ನು ಗುರುತಿಸಲಾಗಿದ್ದು, 6-14 ವರ್ಷ ವಯೋಮಿತಿಯ 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

21400 out of school children traced Govts information to High Court gvd
Author
First Published Feb 17, 2023, 6:00 AM IST

ಬೆಂಗಳೂರು (ಫೆ.17): ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ 24 ಸಾವಿರಕ್ಕೂ ಅಧಿಕ ಮಕ್ಕಳ ಪೈಕಿ 21,407 ಮಕ್ಕಳನ್ನು ಗುರುತಿಸಲಾಗಿದ್ದು, 6-14 ವರ್ಷ ವಯೋಮಿತಿಯ 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ವಿಚಾರವಾಗಿ 2013ರಲ್ಲಿ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ರಾಜ್ಯ ಶಾಲಾ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ.ಆರ್‌.ವಿಶಾಲ್‌ ಸಲ್ಲಿಸಿದ ಪ್ರಮಾಣ ಪತ್ರವನ್ನು ಸರ್ಕಾರಿ ವಕೀಲೆ ಪ್ರತಿಮಾ ಹೊನ್ನಾಪುರ ಅವರು ಒದಗಿಸಿ ಈ ಮಾಹಿತಿ ನೀಡಿದರು.

ಹೈಕೋರ್ಟ್‌ 2022ರ ನ.8ರಂದು ನೀಡಿರುವ ನಿರ್ದೇಶನದಂತೆ ರಾಜ್ಯಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಒಟ್ಟು 24,308 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ತಿಳಿದುಬಂತು. ಅದರಲ್ಲಿ 21,407 ಮಕ್ಳಳನ್ನು ಗುರುತಿಸಲಾಗಿದೆ. ಇನ್ನೂ 2,901 ಮಕ್ಕಳನ್ನು ಗುರುತಿಸಬೇಕಿದೆ. ವಿಳಾಸ ಮತ್ತು ಫೋನ್‌ ನಂಬರ್‌ ತಪ್ಪಾಗಿ ನೀಡಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 2,254 ಮಕ್ಕಳನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. 6ರಿಂದ 14 ವರ್ಷ ವಯೋಮಿತಿಯ ಒಟ್ಟು 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ. 

ಸೋಲು ಖಚಿತವಾದಾಗ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿ: ಬಿ.ಕೆ.ಹರಿಪ್ರಸಾದ್‌

1,813 ಮಕ್ಕಳು ವಲಸೆ ಹೋಗಿದ್ದಾರೆ. 259 ಮಕ್ಕಳು ಅನಾರೋಗ್ಯ ಪೀಡಿತರಾಗಿದ್ದಾರೆ. ಮುಕ್ತ ಶಾಲೆಗೆ 29 ಹಾಗೂ ಮದರಸಾಕ್ಕೆ 120 ಮಕ್ಕಳನ್ನು ದಾಖಲಿಸಲಾಗಿದೆ. 127 ಮಕ್ಕಳು ಸಾವನ್ನಪ್ಪಿದ್ದು, 37 ಮಕ್ಕಳು 6 ವರ್ಷಕ್ಕಿಂತ ಕಡಿಮೆ ವಯೋಮಾನದವರು. 1,756 ಮಕ್ಕಳು 14 ವರ್ಷ ಮೀರಿದವರು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ಇನ್ನೂ 3ರಿಂದ 6 ವರ್ಷ ವಯೋಮಿತಿಯ 5,19,369 ಮಕ್ಕಳು ಅಂಗನವಾಡಿ ಕೇಂದ್ರಗಳಿಗೆ ದಾಖಲಾಗಿದ್ದಾರೆ. 51,084 ಮಕ್ಕಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಾಖಲಾಗಿದ್ದಾರೆ.

ಬಿಜೆಪಿ ದುರಾಡಳಿತದ ವಿರುದ್ಧ ಜನತೆಗೆ ಬೇಸರ: ಸಿದ್ದರಾಮಯ್ಯ

7,747 ಮಕ್ಕಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ವಲಸೆ ಹೋಗಿದ್ದಾರೆ. 11,174 ಮಕ್ಕಳು 6 ವರ್ಷ ಮೀರಿದ್ದು, ಅದರಲ್ಲಿ 211 ಮಕ್ಕಳನ್ನು ಎರಡು ಕೇಂದ್ರಗಳಲ್ಲಿ ನೋಂದಣಿಯಾಗಿದ್ದಾರೆ. 149 ಮಕ್ಕಳು ಮೃತಪಟ್ಟಿದ್ದಾರೆ. 987 ಮಕ್ಕಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ವರದಿಯಲ್ಲಿ ತಪ್ಪಾಗಿ ನಮೂದಿಸಲಾಗಿದೆ. 72 ಮಕ್ಕಳು ಪತ್ತೆಯಾಗಿಲ್ಲ ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ. ಈ ಪ್ರಮಾಣ ಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮೂರು ವಾರ ಮುಂದೂಡಿತು.

Follow Us:
Download App:
  • android
  • ios