Asianet Suvarna News Asianet Suvarna News

ಕೈಗಾರಿಕಾ ಪ್ರದೇಶದಲ್ಲಿ ದಲಿತ ಉದ್ಯಮಿಗಳಿಗೆ ಶೇ.24ರಷ್ಟು ಜಾಗ ಮೀಸಲು; ಸಚಿವ ಎಂ.ಬಿ. ಪಾಟೀಲ

ಕರ್ನಾಟಕದ ಎಲ್ಲ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನುಮುಂದೆ ಶೇ.24 ಜಾಗವನ್ನು ದಲಿತ ಉದ್ಯಮಿಗಳಿಗೆ ಮೀಸಲಾಗಿಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

24 percent land reserved for Dalit entrepreneurs in industrial area says Minister M B Patil sat
Author
First Published Feb 26, 2024, 8:31 PM IST

ಬೆಂಗಳೂರು (ಫೆ.26): ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಭರವಸೆ ನೀಡಿದರು.  ನಿಯೋಗವು ಸಚಿವರ ಬಳಿ ಮಾತನಾಡಿ, 'ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ. ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

ಕರ್ನಾಟಕ ಪೊಲೀಸರಿಗೆ ಗುಡ್‌ ನ್ಯೂಸ್ ಕೊಟ್ಟ ಸರ್ಕಾರ; ಸಿಕ್ಕೇ ಬಿಡ್ತು ಅಂತರ ಜಿಲ್ಲಾ ವರ್ಗಾವಣೆಗೆ ಗ್ರೀನ್ ಸಿಗ್ನಲ್!

ಇದಕ್ಕೆ ಸ್ಪಂದಿಸಿದ ಸಚಿವರು, 'ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರಕಾರದ ಬದ್ಧತೆಯ ಬಗ್ಗೆ ಅನುಮಾನ ಬೇಡ. ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು' ಎಂದು ಆಶ್ವಾಸನೆ ನೀಡಿದರು.

ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ; ಪ್ರತಿವರ್ಷ 148 ಮಹಿಳೆಯರ ಮೇಲೆ ಅತ್ಯಾಚಾರ, 2,630 ಮಂದಿಗೆ ಕಿರುಕುಳ

ಈ ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.

Follow Us:
Download App:
  • android
  • ios