ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರು. ನಗದು, 19.31 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರು. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು(ಏ.22): ಚುನಾವಣಾ ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿರುವ ಚುನಾವಣಾ ಆಯೋಗವು ಶುಕ್ರವಾರ 72.30 ಲಕ್ಷ ರು. ನಗದು ವಶಪಡಿಸಿಕೊಂಡಿದೆ. ನಿಪ್ಪಾಣಿ ಕ್ಷೇತ್ರದಲ್ಲಿ 25 ಲಕ್ಷ ರು. ಮೌಲ್ಯದ 23,880 ಲೀಟರ್ ಮದ್ಯವನ್ನು ಮತ್ತು ಶಿವಾಜಿನಗರ ಕ್ಷೇತ್ರದಲ್ಲಿ 58.59 ಲಕ್ಷ ರು. ಮೌಲ್ಯದ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಚಿಕ್ಕಪೇಟೆ ಕ್ಷೇತ್ರದಲ್ಲಿ 25 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರು. ನಗದು, 19.31 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರು. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದೆ.
52.23 ಕೋಟಿ ರು. ಮೌಲ್ಯದ 13.94 ಲಕ್ಷ ಲೀಟರ್ ಮದ್ಯ, 16.10 ಕೋಟಿ ರು. ಮೌಲ್ಯದ 1,084.03 ಕೆ.ಜಿ. ಮಾದಕ ವಸ್ತುಗಳು,77.87 ಕೋಟಿ ರು. ಮೌಲ್ಯದ 727.45 ಕೆ.ಜಿ. ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ₹76 ಸಾವಿರ ಮೌಲ್ಯದ ಮದ್ಯ, ಕುಕ್ಕರ್ ವಶ
1,795 ಎಫ್‌ಐಆರ್ ದಾಖಲಿಸಲಾಗಿದೆ. 69,656 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 4,529 ಪ್ರಕರಣಗಳನ್ನು ದಾಖಲಿಸಲಾಗಿದೆ. 7,238 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 12,107 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದಿದೆ.
