ಬೆಂಗಳೂರು: ಶಕ್ತಿಸೌಧದಲ್ಲಿ ಬಳಿ ಭುವನೇಶ್ವರಿಯ 25 ಅಡಿ ಎತ್ತರದ ಕಂಚಿನ ಪ್ರತಿಮೆ
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ರಾಜ್ಯದ ಪ್ರಸಿದ್ದ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುಮಿಕ ನೈಜ ತಿಲಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಬೆಂಗಳೂರು(ಜ.25): ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ಇದೇ ಸೋಮವಾರ (ಜ.27ರಂದು) ಪ್ರತಿಷ್ಠಾಪನೆಯಾಗಲಿದ್ದು, ನಿತ್ಯ ಅರ್ಚನೆ ನೆರವೇರಲಿದೆ.
ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ' ಕನ್ನಡ ಎಂಬ ಶೀರ್ಷಿಕೆಯಡಿ ವರ್ಷ ವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅಂತೆಯೇ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದರು.
ಲಕ್ಷ್ಮೀ ಭುವನೇಶ್ವರಿ ದೇವಿ ವಿಗ್ರಹ ವಿರೂಪಗೊಳಿಸಿ ದುಷ್ಕರ್ಮಿ ವಿಕೃತಿ!
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ರಾಜ್ಯದ ಪ್ರಸಿದ್ದ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುಮಿಕ ನೈಜ ತಿಲಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜ ಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ ವನ್ನು ಕಲ್ಪಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ.
ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದು ವಿವರಿಸಿದರು. ನಾಲ್ಕು ದಿಕ್ಕುಗಳಿಂದ ಮೆರವಣಿಗೆ: ಪ್ರತಿಮೆ ಅನಾವರಣದೆ ಕಾರ್ಯಕ್ರಮದ ಪ್ರಯುಕ್ತ ನಗರದ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.
ಹಂಪಿ ಉತ್ಸವದಲ್ಲಿ ತಾಯಿ ಭುವನೇಶ್ವರಿ ದೇವಿ ಭವ್ಯ ಮೆರವಣಿಗೆ: ತೆಪ್ಪ ಸ್ಪರ್ಧೆಯಲ್ಲಿ ಪಾಲ್ಗೊಂಡ ಮೀನುಗಾರರು
ಪೂರ್ವ ದಿಕ್ಕು ಇಂದಿರಾನಗರದಿಂದ ಪಂಪ, ರನ್ನ, ಪೊನ್ನ, ಜನ್ನ, ಸರ್.ಎಂ. ವಿಶ್ವೇಶ್ವರಯ್ಯ, ಸರ್ ಸಿ.ವಿ. ರಾಮನ್, ಸಿ.ಎನ್.ಆರ್. ರಾವ್, ಭೀಮ್ ಸೇನ್ ಜೋಶಿ, ಡಾ. ರಾಜ್‌ಕುಮಾರ್, ಎಸ್. ನಿಜಲಿಂಗಪ್ಪ, ಶಿವಕುಮಾರ ಸ್ವಾಮೀಜಿ, ದೇ. ಜವರೇಗೌಡ, ಡಾ. ವೀರೇಂದ್ರ ಹೆಗಡೆ, ಡಾ. ಪುನೀತ್ ರಾಜ್‌ಕುಮಾರ್ ಅವರ ಫೋಟೋವಿ ರುವ ಪಲ್ಲಕ್ಕಿ ಮೆರವಣಿಗೆ ಯಲ್ಲಿ ಸಾಗಲಿದೆ ಎಂದು ತಿಳಿಸಿದರು.
ಪ್ರತಿಮೆಯ ವೈಶಿಷ್ಟ್ಯತೆ
ನೆಲಮಟ್ಟದಿಂದ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯ ಎತ್ತರವು 43.6 ಅಡಿ ಇದ್ದು, 31.50 ಟನ್ ಪ್ರತಿಮೆ ಯ ಲೋಹದ ಒಟ್ಟು ತೂಕ ಇದೆ. 20 ಟನ್ ಭುವನೇಶ್ವರಿ ಪ್ರತಿಮೆ ಮತ್ತು 11.50 ಟನ್ ಕರ್ನಾಟಕ ನಕ್ಷೆ ಇದೆ. ಉದ್ಯಾನವನ ಸೇರಿದಂತೆ ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣವು 4,500 ಚ.ಮೀ ಇದೆ. ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ. ಕಾಮಗಾರಿಯ ಅಂದಾಜು ವೆಚ್ಚವು 21.24 ಕೋಟಿ ರು. ಆಗಿದ್ದು, ಲೋಕೋ ಪಯೋಗಿ ಇಲಾಖೆಯು ಕಾಮಗಾರಿ ನಿರ್ವಹಣೆ ಕೈಗೊಂಡಿದೆ.