ಇಂದು (ಏ.22) ಕರುನಾಡಲ್ಲಿ ಅಬ್ಬರಿಸಿದ ಕೊರೋನಾ!
ಕರ್ನಾಟಕದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು, ಇಂದು (ಏ.22) ರಾಜ್ಯದಲ್ಲಿ ಕೊರೋನಾ ಮಹಾಸ್ಫೋಟವೇ ಆಗಿದೆ.
ಬೆಂಗಳೂರು, (ಏ.22): ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಟಿಸಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರುತ್ತಲೇ ಇದೆ.
ಇಂದು (ಗುರುವಾರ) ಒಂದೇ ದಿನ ಬರೋಬ್ಬರಿ 25795 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಸೋಂಕಿಗೆ 123 ಜನರು ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,47,997 ಕ್ಕೆ ಏರಿಕೆಯಾಗಿದ್ರೆ, ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 13,885ಕ್ಕೆ ಏರಿಕೆಯಾಗಿದೆ.
18 ವರ್ಷ ಮೇಲ್ಪಟ್ಟವರು ಲಸಿಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾವಾಗಿನಿಂದ?
ಇನ್ನು ರಾಜ್ಯದಲ್ಲಿ ಗುರುವಾರ 5624 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂಲಕ ಇಲ್ಲಿಯವರೆಗೆ ರಾಜ್ಯದಲ್ಲಿ 1037857 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 1,96,236 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಕೊರೋನಾ ಸುನಾಮಿಯೇ ಎದ್ದಿದ್ದು, ಬರೋಬ್ಬರಿ 15,244 ಜನರಿಗೆ ಸೋಂಕು ತಗುಲಿದೆ. 68 ಸೋಂಕಿತರು ಸಾವನ್ನಪ್ಪಿದ್ದಾರೆ. 1,37,813 ಸಕ್ರಿಯ ಪ್ರಕರಣಗಳು ಇವೆ.