ಬೆಂಗಳೂರು, (ಏ.23) : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು (ಶುಕ್ರವಾರ) 26,962 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು,  190 ಮಂದಿ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ. 

, ಈ ಮೂಲಕ ಸೋಂಕಿತರ ಸಂಖ್ಯೆ 1274959ಕ್ಕೆ ಏರಿಕೆಯಾಗಿದ್ರೆ, ಕೊರೋನಾಗೆ ರಾಜ್ಯದಲ್ಲಿ ಇದುವರೆಗೆ ಬರೋಬ್ಬರಿ 14075 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ತೆರೆಯಲು ಮುಂದಾದ ರಾಜ್ಯ ಸರ್ಕಾರ 

ಇನ್ನು ಕಳೆದ 24 ಗಂಟೆಯಲ್ಲಿ 8697 ಸೋಂಕಿತರು ಸೇರಿದಂತೆ ಇದುವರೆಗೆ 1046554 ಜನರು ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸ್ತುತ 26962 ಸಕ್ರಿಯ ಪ್ರಕರಣಗಳಿವೆ.

ಶುಕ್ರವಾರ ಬೆಂಗಳೂರು ನಗರದಲ್ಲಿ 16662 ಕೊರೋನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು,  124 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಸಾವಿನ ಸಂಖ್ಯೆ 5574ಕ್ಕೆ ಏರಿಕೆಯಾಗಿದೆ.