Asianet Suvarna News Asianet Suvarna News

ಕರ್ನಾಟಕದಲ್ಲಿ ಸೋಂಕು ಮಾತ್ರವಲ್ಲ, ಕೊರೋನಾಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲೂ ಏರಿಕೆ

ಈವರೆಗೆ ರಾಜ್ಯದಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಕೊರೋನಾಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲೂ  ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇನ್ನು ಶುಕ್ರವಾರದ ಕೊರೋನಾ ಅಂಕಿ-ಅಂಶ ಈ ಕೆಳಗಿನಂತಿದೆ.

271  fresh COVID19 cases reported in Karnataka on June 12th
Author
Bengaluru, First Published Jun 12, 2020, 8:22 PM IST

ಬೆಂಗಳೂರು, (ಜೂನ್.12): ರಾಜ್ಯದಲ್ಲಿ ಕೊರೋನಾ ವೈರಸ್‌ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಿದ್ದು, ಇಂದು (ಶುಕ್ರವಾರ) ಒಂದೇ ದಿನ ಬರೋಬ್ಬರಿ 7 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 79ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ನಾಲ್ವರು, ಕಲಬುರಗಿಯಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಕೊರೋನಾ ಹೆಲ್ತ್ ಬುಲೆಟಿನ್‌ ತಿಳಿಸಿದೆ.

12 ದಿನದಲ್ಲಿ 1 ಲಕ್ಷ ಕೇಸ್, ಭಾರತದಲ್ಲಿ ಅಟ್ಟಹಾಸ ಮೆರೆದ ಕೊರೋನಾ ವೈರಸ್ !

ಇನ್ನು ಹೊಸದಾಗಿ 271 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. ಹೊಸದಾಗಿ ಪತ್ತೆಯಾದ 271 ಸೋಂಕಿತರ ಪೈಕಿ 92 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, 14 ಮಂದಿ ವಿದೇಶ ಪ್ರಯಾಣದ ಇತಿಹಾಸ ಹೊಂದಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು?
271  fresh COVID19 cases reported in Karnataka on June 12th
ಕಳೆದ 24 ಗಂಟೆಗಳಲ್ಲಿ ಬಳ್ಳಾರಿ 97, ಬೆಂಗಳೂರು 36, ಉಡುಪಿ 22, ಕಲಬುರ್ಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 9, ಮೈಸೂರು 9, ತುಮಕೂರು 7, ಶಿವಮೊಗ್ಗ 6, ರಾಯಚೂರು 4, ಉತ್ತರ ಕನ್ನಡ 4, ಚಿತ್ರದುರ್ಗ 3, ರಾಮನಗರ 3, ಮಂಡ್ಯ 2, ಬೆಳಗಾವಿ, ವಿಜಯಪುರ, ಯಾದಗಿರಿಯಲ್ಲಿ ತಲಾ ಒಂದು ಕೊರೋನಾ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಚೇತರಿಕೆಯ ಪ್ರಮಾಣವೂ ಹೆಚ್ಚು
271  fresh COVID19 cases reported in Karnataka on June 12th
ಹೌದು....ಒಂದು ಕಡೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ರೆ, ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದೆ. ಈವರೆಗೆ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 3440ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2995 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್19 ಮಾಹಿತಿ: 12ನೇ ಜೂನ್ 2020

ಒಟ್ಟು ಪ್ರಕರಣಗಳು: 6516
ಮೃತಪಟ್ಟವರು: 79
ಗುಣಮುಖರಾದವರು: 3440
ಹೊಸ ಪ್ರಕರಣಗಳು: 271

ಇತರೆ ಮಾಹಿತಿ: ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.1/2/ pic.twitter.com/VQTpqx13Vz

— CM of Karnataka (@CMofKarnataka) June 12, 2020
Follow Us:
Download App:
  • android
  • ios