Asianet Suvarna News Asianet Suvarna News

ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆಗೆ 29 ಸಾವಿರ ನೋಂದಣಿ: ಡಿಕೆಶಿ

ಆ.15ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ನ್ಯಾಷನಲ್‌ ಕಾಲೇಜ್‌ವರೆಗೆ ನಡೆಯುವ ಜಾಥಾ

29000 People Registered for Congress Freedom Jatha Says DK Shivakumar grg
Author
Bengaluru, First Published Aug 8, 2022, 4:00 AM IST

ಬೆಂಗಳೂರು(ಆ.08): ರಾಜ್ಯ ಕಾಂಗ್ರೆಸ್‌ ವತಿಯಿಂದ ಆ.15 ರಂದು ಹಮ್ಮಿಕೊಂಡಿರುವ ‘ಸ್ವಾತಂತ್ರ್ಯ ನಡಿಗೆ’ ಜಾಥಾದಲ್ಲಿ ಭಾಗವಹಿಸಲು ಈಗಾಗಲೇ 29,000 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಈ ರಾಜಕೀಯೇತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ನೌಕರರು, ಕಲಾವಿದರು ಸೇರಿ ಎಲ್ಲರೂ ಭಾಗವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕರೆ ನೀಡಿದರು. ಕನಿಷ್ಠ ಒಂದೂವರೆ ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಉದ್ದೇಶವಿದೆ. ಈಗಾಗಲೇ 1.5 ರಾಷ್ಟ್ರಧ್ವಜ, ಲಕ್ಷ ಟಿ ಶರ್ಚ್‌, ಟೋಪಿ ಸಿದ್ಧಪಡಿಸಿದ್ದು, ಭಾಗವಹಿಸುವವರಿಗೆ ಉಚಿತವಾಗಿ ನೀಡಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ತಬ್ಧ ಚಿತ್ರಗಳ ಪ್ರದರ್ಶನ ಸೇರಿದಂತೆ ಹಲವು ರೀತಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ತ್ರಿವರ್ಣ ಧ್ವಜವನ್ನು ಹಿಡಿದು ಸ್ವಾತಂತ್ರ್ಯ ಉದ್ಯಾನವನದಿಂದ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದವರೆಗೆ ನಡೆಯಬೇಕು ಎಂದು ಹೇಳಿದರು.

ಸ್ವಾಂತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ, ಬಸವನಗುಡಿ ಹಾಗೂ ಪದ್ಮನಾಭನಗರ ಕ್ಷೇತ್ರಗಳಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿದ ಅವರು, ಕೋಣನಕುಂಟೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಸಿದ್ದು, ಡಿಕೆಶಿ ಆಲಿಂಗನ ನೋಡಿ ಖುಷಿ: ಇಬ್ಬರ ಒಗ್ಗಟ್ಟಿನಿಂದ ಮುಂದೆ ಪಕ್ಷ ಅಧಿಕಾರಕ್ಕೆ, ರಾಹುಲ್‌ ಗಾಂಧಿ

ಮೆಟ್ರೋ ಸೇವೆ ಬಳಸಿ:

ಕಾರ್ಯಕ್ರಮಕ್ಕೆ ಬರುವವರು ಮೆಟ್ರೋ ಮಾರ್ಗಗಳನ್ನು ಬಳಸಬೇಕು. ಸ್ವಂತ ವಾಹನ ಬಳಕೆ ಕಡಿಮೆ ಮಾಡಬೇಕು. ಸಮೂಹ ಸಾರಿಗೆ ಪ್ರೋತ್ಸಾಹಿಸಲು ಆ.15 ರಂದು ಮೆಟ್ರೋ ಪ್ರಯಾಣಿಕರಿಗೆ ಶೇ.50 ರಷ್ಟುರಿಯಾಯಿತಿ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹೇಳಿದರು.

ಬಿಜೆಪಿ ಸ್ನೇಹಿತರು ‘ಹರ್‌ ಘರ್‌ ತಿರಂಗಾ’ ಅಭಿಯಾನದಲ್ಲಿ ತ್ರಿವರ್ಣಧ್ವಜಕ್ಕೆ .25 ನಿಗದಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿಯೇ ರಾಷ್ಟ್ರಧ್ವಜ ನೀಡಬಹುದಿತ್ತು. ನಾವು ಸ್ವಾತಂತ್ರ್ಯ ನಡಿಗೆ ಜಾಥಾದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡವಿರಗೆ 1.5ಲಕ್ಷ ರಾಷ್ಟ್ರಧ್ವಜ, ಟೋಪಿ, ಟಿ-ಶರ್ಚ್‌ ಉಚಿತವಾಗಿ ನೀಡುತ್ತಿದ್ದೇವೆ. ಅನೇಕರು ಸ್ತಬ್ಧ ಚಿತ್ರ ಮಾಡಲು ಮುಂದಾಗಿದ್ದು, ಕಲಾವಿದರೂ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ ಪ್ರಮಾಣಪತ್ರವನ್ನೂ ನೀಡುತ್ತೇವೆ ಎಂದರು.

ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸಲು ಅವಕಾಶ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಎಐಸಿಸಿಯಿಂದ ನಾಯಕರು ಬರಲಿದ್ದು, ಯಾರು ಬರಬೇಕು ಎಂಬುದನ್ನು ಎಐಸಿಸಿಯೇ ತೀರ್ಮಾನಿಸಲಿದೆ. ಹೀಗಾಗಿ ಯಾರು ಬರುತ್ತಾರೆ ಎಂಬುದನ್ನು ಸದ್ಯಕ್ಕೆ ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
 

Follow Us:
Download App:
  • android
  • ios